ಹುಬ್ಬಳ್ಳಿ : ವಾಲ್ಮೀಕಿ, ಮೂಡಾ ಹಗರಣದಿಂದ ಸಿಎಂ ಸಮಾಜವಾದಿ ಮುಖವಾಡ ಕಳಚಿದೆ, ಅವರು ರಾಜೀನಾಮೆ ಕೊಡ್ಲೇಬೇಕು. ಮೂಡಾ ಹಗರಣ ಕೇವಲ 14 ನಿವೇಶನಕ್ಕೆ ಸೀಮಿತವಾದದ್ದಲ್ಲ,
5000 ಕೋಟಿಗೂ ಮೀರಿದ ಹಗರಣ ಇದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಬಿ.ವೈ.ವಿಜಯೇಂದ್ರ ಮಾತನಾಡಿ, ಮೂಡಾ ನಿವೇಶನಗಳು ರಿಯಲ್ ಎಸ್ಟೇಟ್ ಮಾಫಿಯಾ. ಸಿಎಂ ತವರು ಜಿಲ್ಲೆಯಲ್ಲಿ ಬಡವರನ್ನು ತಲುಪಬೇಕಿದ್ದ ಕೋಟ್ಯಂತರ ರೂ.ಬೆಲೆ ಬಾಳುವ ಸಾವಿರಾರು ಮುಡಾ ನಿವೇಶನಗಳು ರಿಯಲ್ ಎಸ್ಟೇಟ್ ಮಾಫಿಯಾ ಮತ್ತು ಕಾಂಗ್ರೆಸ್ ನಾಯಕರ ಪಾಲಾಗಿವೆ ಎಂದಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ಏಕ ವ್ಯಕ್ತಿ ನೇತೃತ್ವದ ತನಿಖಾ ಆಯೋಗ, ವಿಶೇಷ ತನಿಖಾ ತಂಡ (ಎಸ್ಐಟಿ)ದಿಂದ ತನಿಖೆ ಸಾಧ್ಯವಿಲ್ಲ. ಹಾಗಾಗಿ ಮುಖ್ಯಮಂತ್ರಿ ಅವರ ಮುಡಾ ಪ್ರಕರಣವನ್ನು ಕೂಡಲೇ ಸಿಬಿಐ ತನಿಖೆಗೇ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ಇದನ್ನೂ ಓದಿ : ಪ್ರಜ್ವಲ್ ರೇವಣ್ಣ ವಿರುದ್ಧ 2,000 ಪುಟಗಳ ಮೊದಲ ಚಾರ್ಜ್ ಶೀಟ್ ಸಲ್ಲಿಕೆ – 123 ಸಾಕ್ಷ್ಯ ಸಂಗ್ರಹ..!