ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ದಳಪತಿ ವಿಜಯ್ ಪ್ರಮಾಣವಚನ ಸ್ವೀಕಾರ!

ಚೆನ್ನೈ: ತಮಿಳುನಾಡು ರಾಜಕೀಯ ಇತಿಹಾಸದಲ್ಲಿ ಇಂದು ಹೊಸ ಅಧ್ಯಾಯವೊಂದು ಆರಂಭವಾಗಿದ್ದು, ತಮಿಳಗ ವೆಟ್ರಿ ಕಳಗಂ (TVK) ಅಧ್ಯಕ್ಷ ವಿಜಯ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಚೆನ್ನೈನ ಜವಾಹರಲಾಲ್ ನೆಹರು ಇಂಡೋರ್ ಸ್ಟೇಡಿಯಂನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ವಿಜಯ್ ಅವರಿಗೆ ಪ್ರಮಾಣವಚನ ಬೋಧಿಸಿದರು.

ಇದೇ ವೇಳೆ ವಿಜಯ್ ನೇತೃತ್ವದ ಹೊಸ ಸಚಿವ ಸಂಪುಟಕ್ಕೂ ರಾಜ್ಯಪಾಲರು ಪ್ರಮಾಣವಚನ ಬೋಧಿಸಿದರು. ಸಚಿವರಾಗಿ ‘ಬಸ್ಸಿ’ ಎನ್ ಆನಂದ್, ಆದವ್ ಅರ್ಜುನ, ಕೆ.ಎ. ಸೆಂಗೊಟ್ಟಯ್ಯನ್, ಕೆ.ಜಿ. ಅರುಣ್ರಾಜ್, ಪಿ. ವೆಂಕಟರಮಣನ್, ಸಿ.ಟಿ.ಆರ್. ನಿರ್ಮಲ್ ಕುಮಾರ್, ಎ. ರಾಜ್ಮೋಹನ್, ಕೀರ್ತನಾ ಹಾಗೂ ಕೆ.ಟಿ. ಪ್ರಭು ಪ್ರಮಾಣವಚನ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ವಿವಿಧ ರಾಜಕೀಯ ನಾಯಕರು, ಚಿತ್ರರಂಗದ ಗಣ್ಯರು, ಉದ್ಯಮಿಗಳು ಹಾಗೂ ಸಾವಿರಾರು ಅಭಿಮಾನಿಗಳು ಭಾಗಿಯಾಗಿದ್ದರು. ರಾಜಭವನದ ಸುತ್ತಮುತ್ತ ಟಿವಿಕೆ ಪಕ್ಷದ ಕಾರ್ಯಕರ್ತರು ಭರ್ಜರಿ ಸಂಭ್ರಮಾಚರಣೆ ನಡೆಸಿದರು.

ಇದನ್ನೂ ಓದಿ : ನಾಳೆ ಸಚಿವ ಡಿ. ಸುಧಾಕರ್ ಅಂತ್ಯಕ್ರಿಯೆ!

Btv Kannada
Author: Btv Kannada

Leave a Comment

Read More