ಬೆಂಗಳೂರು : ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿದ್ದಾರೆ. ಹೆಚ್ಎಎಲ್ ಆವರಣದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಮೋದಿ, ರಾಜ್ಯ ಸರ್ಕಾರದ ನಾಯಕರ ನಡುವಿನ ಶೀತಲ ಸಮರದ ಬಗ್ಗೆ ವ್ಯಂಗ್ಯವಾಡಿದರು.
ಕರ್ನಾಟಕದಲ್ಲಿ ಮುಖ್ಯಮಂತ್ರಿಗಳು ತಮ್ಮ ಕುರ್ಚಿಯಲ್ಲಿ ಎಷ್ಟು ದಿನ ಇರುತ್ತಾರೋ ಯಾರಿಗೂ ಗೊತ್ತಿಲ್ಲ. ಅಧಿಕಾರ ಹಂಚಿಕೆಯ ಈ ಕಿತ್ತಾಟದಿಂದಾಗಿ ಜನಸಾಮಾನ್ಯರ ಸಮಸ್ಯೆಗಳು ಮೂಲೆಗುಂಪಾಗಿವೆ ಎಂದು ಲೇವಡಿ ಮಾಡಿದರು.
ಕಾಂಗ್ರೆಸ್ ಎಲ್ಲೆಲ್ಲಿ ಅಧಿಕಾರಕ್ಕೆ ಬರುತ್ತದೆಯೋ ಅಲ್ಲೆಲ್ಲಾ ಗುಂಪುಗಾರಿಕೆ ಮತ್ತು ಆಂತರಿಕ ಜಗಳ ಸಾಮಾನ್ಯವಾಗಿದೆ. ಈ ಹಿಂದೆ ರಾಜಸ್ಥಾನದಲ್ಲಿ ನಡೆದ ಅಧಿಕಾರಕ್ಕಾಗಿನ ಕಚ್ಚಾಟವನ್ನು ನೆನಪಿಸಿದ ಅವರು, ಕರ್ನಾಟಕದಲ್ಲೂ ಈಗ ಅದೇ ಹಾದಿ ಮುಂದುವರಿಯುತ್ತಿದೆ ಎಂದು ಎಚ್ಚರಿಸಿದರು.
ಕಾಂಗ್ರೆಸ್ ಸರ್ಕಾರ ಎಲ್ಲೆಲ್ಲಿ ಇದೆಯೋ ಅಲ್ಲೆಲ್ಲ ಖಜಾನೆ ಲೂಟಿ ಹೊಡೆಯುತ್ತಿದ್ದಾರೆ. ಜನರು ಸಮಸ್ಯೆಗಳಿಂದ ಬಳಲುತ್ತಿದ್ದರೆ, ಸರ್ಕಾರದ ನಾಯಕರು ಮಾತ್ರ ಲೂಟಿ ಹೊಡೆದ ಹಣಕ್ಕಾಗಿ ಆಂತರಿಕ ಜಗಳ ಮತ್ತು ಕುರ್ಚಿ ಕಿತ್ತಾಟದಲ್ಲಿ ಮುಳುಗಿದ್ದಾರೆ. ರಾಜಸ್ಥಾನದಲ್ಲಿ ಏನಾಯಿತು ಎಂಬುದು ನಿಮಗೆ ಗೊತ್ತಿದೆ, ಕರ್ನಾಟಕದಲ್ಲೂ ಅದೇ ಹಾದಿ ಮುಂದುವರಿಯುತ್ತಿದೆ ಎಂದು ಮೋದಿ ಹೇಳಿದರು.
ಇದನ್ನೂ ಓದಿ : ಪ್ರಧಾನಿ ಮೋದಿಗೆ 13ಕೆಜಿ ಬೆಳ್ಳಿಯ ಪ್ರತಿಮೆ ನೀಡಿದ ಬಿಜೆಪಿ ನಾಯಕರು!







