ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಇಂದು ಸಿಲಿಕಾನ್ ಸಿಟಿ ಬೆಂಗಳೂರಿಗೆ ಆಗಮಿಸಿದ್ದು, ಮೋದಿ ಸಂಚರಿಸುವ ರಸ್ತೆ ಮಾರ್ಗದ ಸಮೀಪ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. ಪ್ರಧಾನಿಯವರ ಆರ್ಟ್ ಆಫ್ ಲಿವಿಂಗ್ ಆಶ್ರಮ ಭೇಟಿಯ ಮಾರ್ಗದಲ್ಲಿ ಈ ಜಿಲೆಟಿನ್ ಕಡ್ಡಿಗಳು ಸಿಕ್ಕಿವೆ.
ಭದ್ರತಾ ಲೋಪದ ಹಿನ್ನೆಲೆಯಲ್ಲಿ ಪೊಲೀಸರು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಪ್ರಧಾನಿಗಳು ಬರುವ ಮೊದಲೇ ಜಾಗರೂಕತೆಯಿಂದ ಕಾರ್ಯನಿರ್ವಹಿಸಿದ ಪೊಲೀಸರು ಸ್ಫೋಟಕಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಕೇಂದ್ರ ವಿಭಾಗದ ಡಿಐಜಿ ಗಿರೀಶ್ ಅವರ ನೇತೃತ್ವದಲ್ಲಿ ತನಿಖೆ ಚುರುಕುಗೊಂಡಿದೆ.
ಈ ಸಂಬಂಧ ಓರ್ವ ಶಂಕಿತ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರು ನಗರ ಪೊಲೀಸ್ ಮತ್ತು ರಾಮನಗರ ಪೊಲೀಸರು ಜಂಟಿಯಾಗಿ ಈ ಪ್ರಕರಣದ ತನಿಖೆಯನ್ನು ಕೈಗೊಂಡಿದ್ದಾರೆ.
ಇದನ್ನೂ ಓದಿ : ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರುತ್ತಾರೋ ಗೊತ್ತಿಲ್ಲ – ಪ್ರಧಾನಿ ಮೋದಿ ವ್ಯಂಗ್ಯ!
Author: Btv Kannada
Post Views: 226








