Download Our App

Follow us

Home » ರಾಜಕೀಯ » ಇಂದು ಬೆಳಗಾವಿಗೆ ಸಿಎಂ ಸಿದ್ದರಾಮಯ್ಯ – ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಲೋಕಾರ್ಪಣೆ..!

ಇಂದು ಬೆಳಗಾವಿಗೆ ಸಿಎಂ ಸಿದ್ದರಾಮಯ್ಯ – ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಲೋಕಾರ್ಪಣೆ..!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಇಂದು ಬೆಳಗಾವಿ ಪ್ರವಾಸ ಕೈಗೊಂಡಿದ್ದು, ಒಂದು ತಿಂಗಳಲ್ಲಿ ಎರಡನೇ ಬಾರಿಗೆ ಬೆಳಗಾವಿಗೆ ತೆರಳುತ್ತಿರುವುದು ತೀವ್ರ ಕುತೂಹಲ ಮೂಡಿಸಿದೆ. ಆಗಸ್ಟ್ 5ರಂದು ನೆರೆ ವೀಕ್ಷಿಸಲು ಗೋಕಾಕ್ ತಾಲೂಕಿಗೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ, ಇಂದು ಗೋಕಾಕ್ ಹಾಗೂ ಮೂಡಲಗಿ ತಾಲೂಕುಗಳಲ್ಲಿ ನಾಲ್ಕು ಕಡೆ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಗಳ ಲೋಕಾರ್ಪಣೆ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಬೆಳಗ್ಗೆ ‌10.30ಕ್ಕೆ ಬೆಂಗಳೂರಿನ HALನಿಂದ ವಿಶೇಷ ವಿಮಾನದ ಮೂಲಕ ಸಿಎಂ ಸಿದ್ದರಾಮಯ್ಯ ಬೆಳಗಾವಿಗೆ ತೆರಳಿ, ಬಳಿಕ ರಸ್ತೆ ಮಾರ್ಗವಾಗಿ ಗೋಕಾಕ್ ತಾಲೂಕಿನ ಕೌಜಲಗಿ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. 1.30ಕ್ಕೆ ಕೌಜಲಗಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಹಾಗೂ ಕೋಟೆ ಲೋಕಾರ್ಪಣೆಗೊಳಿಸಿದ ಬಳಿಕ ಕುರುಬ ಸಂಘದ ರಾಜ್ಯಾಧ್ಯಕ್ಷ ಡಾ.ರಾಜೇಂದ್ರ ಸಣ್ಣಕ್ಕಿ ಫಾರ್ಮ್ ಹೌಸ್​​ಗೆ ತೆರಳಲಿದ್ದಾರೆ. ಇದಾದ ನಂತರ ಕಳ್ಳಿಗುದ್ದಿಯಲ್ಲಿ, 3.30ಕ್ಕೆ ಯಾದವಾಡ ಹಾಗೂ 4.30ಕ್ಕೆ ಕಲ್ಲೋಳಿಯಲ್ಲಿ ರಾಯಣ್ಣ ಪ್ರತಿಮೆ ಲೋಕಾರ್ಪಣೆಗೊಳಿಸಿ ವಿಶೇಷ ವಿಮಾನದ ಮೂಲಕ ಇಂದು ರಾತ್ರಿಯೇ ಸಿಎಂ ಸಿದ್ದರಾಮಯ್ಯ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

ಇನ್ನು ಮುಡಾ ಹಗರಣದ ತನಿಖೆ ಸಂಬಂಧ ಇದೇ 29ರಂದು ಹೈಕೋರ್ಟ್​​ನಲ್ಲಿ ಮಹತ್ವದ ವಿಚಾರಣೆ ನಡೆಯಲಿದೆ. ವಿಪಕ್ಷಗಳು ಸಿಎಂ ರಾಜೀನಾಮೆಗೆ ಪಟ್ಟು ಹಿಡಿದಿದ್ದು, ಇಂತಹ ಒತ್ತಡದಲ್ಲಿದ್ದರೂ ಸಿಎಂ ಸಿದ್ದರಾಮಯ್ಯ ಬೆಳಗಾವಿ ಪ್ರವಾಸ ಹಮ್ಮಿಕೊಂಡಿದ್ದಾರೆ.

 ಇದನ್ನೂ ಓದಿ : ಜೈಲಲ್ಲಿ ನಟ ದರ್ಶನ್​ಗೆ ‘ರಾಜಾತಿಥ್ಯ’ ವಿಚಾರ – ತನಿಖೆಗೆ ಆದೇಶಿಸಿದ ಕಾರಾಗೃಹ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ..!

Leave a Comment

DG Ad

RELATED LATEST NEWS

Top Headlines

MLA ಮುನಿರತ್ನ ವಿರುದ್ಧ ರೇಪ್ ಆರೋಪದ ಬೆನ್ನಲ್ಲೇ ಮಾಜಿ ಕಾರ್ಪೊರೇಟರ್ ಪತಿಯ ಹನಿಟ್ರ್ಯಾಪ್ ವಿಡಿಯೋ ವೈರಲ್..!

ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ ಸೇರಿ ಏಳು ಮಂದಿಯ ವಿರುದ್ಧ ರಾಮನಗರ ಜಿಲ್ಲಾ ವ್ಯಾಪ್ತಿಯ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ

Live Cricket

Add Your Heading Text Here