ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯದೊಂದಿಗೆ ಸಿಗರೇಟು, ಟೀ ಕುಡಿಯುತ್ತಿರುವ ಫೋಟೋ ಹೊರಬಿದ್ದಿದೆ.
ಜೈಲಿನ ಒಳಗೆ ನಟನಿಗೆ ರಾಜಾತಿಥ್ಯ ನೀಡುತ್ತಿರುವ ಫೋಟೋಗಳು ಮತ್ತು ವಿಡಿಯೋ ಕರೆ ಮಾತನಾಡಿರುವ ಸಂಗತಿ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಹಾಗಾಗಿ ಈ ಘಟನೆಗೆ ಸಂಬಂಧಿಸಿದಂತೆ 7 ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಇದೀಗ ಬಿಟಿವಿ ವರದಿಯ ಬಿಗ್ ಇಂಪ್ಯಾಕ್ಟ್ನಿಂದ ದರ್ಶನ್ನ ಬೇರೆ ಜೈಲಿಗೆ ಹಾಕುವಂತೆ ಸಿಎಂ ಆದೇಶ ನೀಡಿದ್ದಾರೆ. ಸರ್ಕಾರಕ್ಕೆ ಭಾರೀ ಮುಜುಗರ ಹಿನ್ನಲೆಯಲ್ಲಿ ದರ್ಶನ್ನ ಶಿಫ್ಟ್ ಮಾಡಲಿದ್ದಾರೆ.
ದರ್ಶನ್ನ್ನು ತುಮಕೂರು, ಬಳ್ಳಾರಿ ಜೈಲು ಅಥವಾ ಬೆಳಗಾವಿಯ ಹಿಂಡಲಗಾ ಜೈಲಿಗೂ ಕಳಿಸೋ ಬಗ್ಗೆ ಚರ್ಚೆ ನಡೆಯುತ್ತಿದೆ. ರೌಡಿ ವಿಲ್ಸನ್ ಗಾರ್ಡನ್ ನಾಗನನ್ನು ಕೂಡಾ ಬೇರೆ ಕಡೆಗೆ ಶಿಫ್ಟ್ ಮಾಡುವ ಸಾಧ್ಯತೆಯಿದೆ. ದರ್ಶನ್ನ ತಕ್ಷಣ ಶಿಫ್ಟ್ ಮಾಡುವಂತೆ ಪೊಲೀಸ್ ಮಹಾನಿದೇರ್ಶಕರಿಗೆ ಸಿಎಂ ಸೂಚನೆ ಕೊಟ್ಟಿದ್ದಾರೆ. ತಪ್ಪಿತಸ್ಥ ಅಧಿಕಾರಿಗಳ ಮೇಲೂ ಕಠಿಣ ಕ್ರಮಕ್ಕೆ ಆದೇಶಿಸಿದ್ದಾರೆ.
ಇದನ್ನೂ ಓದಿ : ದರ್ಶನ್ಗೆ ರಾಜಾತಿಥ್ಯ ನೀಡಿದ್ದಕ್ಕೆ 7 ಅಧಿಕಾರಿಗಳು ಸಸ್ಪೆಂಡ್..!