ನವದೆಹಲಿ : ಕಳೆದ 10 ವಾರಗಳಲ್ಲಿ ಭಾರತದ ಪ್ರಮುಖ ತೈಲ ಮಾರುಕಟ್ಟೆ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOC), ಭಾರತ್ ಪೆಟ್ರೋಲಿಯಂ (BPCL) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ (HPCL) ಅಂದಾಜು 1 ಲಕ್ಷ ಕೋಟಿ ರೂ. ನಷ್ಟ ಅನುಭವಿಸಿದೆ.
ಯುದ್ಧದ ಎಫೆಕ್ಟ್ನಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್ಗೆ 120 ಡಾಲರ್ ಗಡಿ ದಾಟಿದೆ. ಜಾಗತಿಕವಾಗಿ ಬೆಲೆ ಏರಿಕೆಯಾಗಿದ್ದರೂ, ಭಾರತದ ಸರ್ಕಾರಿ ಸ್ವಾಮ್ಯದ ಕಂಪನಿಗಳು ಏಪ್ರಿಲ್ 2022 ರಿಂದ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಹೆಚ್ಚಿಸದೆ ಸ್ಥಿರವಾಗಿ ಕಾಯ್ದುಕೊಂಡಿವೆ. ಇದರಿಂದಾಗಿ ಕಂಪನಿಗಳಿಗೆ ಉತ್ಪಾದನಾ ವೆಚ್ಚಕ್ಕಿಂತ ಕಡಿಮೆ ದರಕ್ಕೆ ಮಾರಾಟ ಮಾಡುವ ಅನಿವಾರ್ಯತೆ ಎದುರಾಗಿದೆ.
ಪ್ರಸ್ತುತ ಈ ಕಂಪನಿಗಳು ಪ್ರತಿದಿನ ಅಂದಾಜು 1,600 ರಿಂದ 1,700 ಕೋಟಿ ರೂ. ನಷ್ಟ ಅನುಭವಿಸುತ್ತಿವೆ. ಪ್ರತಿ ಲೀಟರ್ ಪೆಟ್ರೋಲ್ ಮೇಲೆ ಸುಮಾರು 18 ರಿಂದ 21 ರೂ. ಮತ್ತು ಡೀಸೆಲ್ ಮೇಲೆ 28 ರಿಂದ 35 ರೂ. ವರೆಗೆ ನಷ್ಟವಾಗುತ್ತಿದೆ. ಇದೀಗ ಭಾರತದ ತೈಲ ಕಂಪನಿಗಳು 1 ಲಕ್ಷ ಕೋಟಿ ನಷ್ಟ ಅನುಭವಿಸಿದೆ ಎಂದು ಅಂದಾಜಿಸಲಾಗಿದೆ.
ಇದನ್ನೂ ಓದಿ : ಪ್ರಧಾನಿ ಮೋದಿ ಸಾಗುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್ – ತನಿಖೆಗೆ 4 ತಂಡ ರಚನೆ!








