ಬೆಂಗಳೂರು ಸೇರಿ ಇಂದು ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ!

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಇಂದು ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯಿದೆ. ಕೊಡಗು, ಶಿವಮೊಗ್ಗ ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಇಂದು ಭಾರೀ ಮಳೆಯಾಗಲಿದ್ದು, ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ. ಇನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿ ಶುಷ್ಕ ವಾತಾವರಣ ಇರಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಮೇ 9, 10ರಂದು ದಕ್ಷಿಣ ಒಳನಾಡಿನ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ. 64.5 ಮಿ.ಮೀ ಇಂದ 115.5 ಮಿ.ಮೀ ಮಳೆಯಾಗಲಿದ್ದು, ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುನ್ಸೂಚನೆ ನೀಡಿದೆ. ಹೀಗಾಗಿ ದಕ್ಷಿಣ ಒಳನಾಡಿಗೆ ಈ ಎರಡು ದಿನ ಯೆಲ್ಲೋ ಅಲರ್ಟ್​ ನೀಡಲಾಗಿದೆ.

ಇದನ್ನೂ ಓದಿ : ಭಾರತದಲ್ಲಿ ತೈಲ ಕಂಪನಿಗಳಿಗೆ 1 ಲಕ್ಷ ಕೋಟಿ ನಷ್ಟ!

Btv Kannada
Author: Btv Kannada

Leave a Comment

Read More