ನೀವು ಇತಿಹಾಸ ನಿರ್ಮಿಸಿದ್ದೀರಿ – ಕರೆ ಮಾಡಿ ಸಿಎಂ ವಿಜಯ್​ಗೆ ಅಭಿನಂದಿಸಿದ ಸಿದ್ದರಾಮಯ್ಯ!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ತಮಿಳುನಾಡಿನ ನೂತನ ಮುಖ್ಯಮಂತ್ರಿ ದಳಪತಿ ವಿಜಯ್‌ ಅವರಿಗೆ ಕರೆ ಮಾಡಿ ಅಭಿನಂದನೆ ತಿಳಿಸಿದ್ದಾರೆ.

ಸಿದ್ದರಾಮಯ್ಯ ಅವರು ವಿಜಯ್‌ಗೆ ಕರೆ ಮಾಡಿ ಮಾತನಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇತಿಹಾಸ ಸೃಷ್ಟಿ ಮಾಡಿದ ನಿಮಗೆ ಅಭಿನಂದನೆಗಳು, ಬೆಂಗಳೂರಿಗೆ ಬಂದಾಗ ಇಬ್ಬರು ಭೇಟಿಯಾಗೋಣ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇನ್ನು ಸೋಶಿಯಲ್​ ಮೀಡಿಯಾದಲ್ಲಿ ಸಿಎಂ ಸಿದ್ದರಾಮಯ್ಯ ಪೋಸ್ಟ್ ಹಂಚಿಕೊಂಡು, ಸಿನಿಮಾ ಪ್ರಪಂಚದಿಂದ ಜನಸೇವೆಯತ್ತ ಗಮನಾರ್ಹ ಪ್ರಜಾಪ್ರಭುತ್ವ ಪ್ರಯಾಣ ಬೆಳೆಸುತ್ತಿರುವ ತಮಿಳುನಾಡಿನ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರಿಗೆ ಅಭಿನಂದನೆಗಳು.

ಕರ್ನಾಟಕ ಮತ್ತು ತಮಿಳುನಾಡು ನಡುವೆ ಜನರ ಅಭಿವೃದ್ಧಿ, ಸಾಂಸ್ಕೃತಿಕ ಬಾಂಧವ್ಯ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ನಾವು ಒಟ್ಟಾಗಿ ಕೆಲಸ ಮಾಡೋಣ. ತಮಿಳುನಾಡಿನ ಜನರ ಸೇವೆಯಲ್ಲಿ ಯಶಸ್ವಿ ಮತ್ತು ಪರಿವರ್ತನಾತ್ಮಕ ಆಡಳಿತ ನೀಡಲು ಶುಭಾಶಯ ತಿಳಿಸಿದ್ದಾರೆ.

ಇದನ್ನೂ ಓದಿ : ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಚಿನ್ನದ ಬೆಲೆ ಇಳಿಕೆ – ಇಂದಿನ ದರ ಎಷ್ಟು?

Btv Kannada
Author: Btv Kannada

Leave a Comment

Read More