ಹುಬ್ಬಳ್ಳಿ : ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 8 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಧಾರವಾಡ ಜಿಲ್ಲೆ ಕಲಘಟಗಿಯ ತಡಸ ಕ್ರಾಸ್ ಬಳಿ ಬುಧವಾರ ಬೆಳಗ್ಗೆ ನಡೆದಿದೆ. ಬಸಮ್ಮ(38) ಅಪಘಾತದಲ್ಲಿ ಮೃತಪಟ್ಟ ಮಹಿಳೆ.
ಟಾಟಾ ಏಸ್ ವಾಹನಕ್ಕೆ ಟ್ರಕ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಟಾಟಾ ಏಸ್ನಲ್ಲಿದ್ದ ಮಹಿಳೆಯರು ಕೂಲಿ ಕೆಲಸಕ್ಕೆಂದು ತಾರಿಹಾಳ ಕೈಗಾರಿಕಾ ಪ್ರದೇಶಕ್ಕೆ ತೆರಳುತ್ತಿದ್ದರು ಎನ್ನಲಾಗಿದ್ದು, ತಡಸ ಕ್ರಾಸ್ ಬಳಿ ವೇಗವಾಗಿ ಬಂದ ಟ್ರಕ್ ಟಾಟಾ ಏಸ್‌ಗೆ ಡಿಕ್ಕಿಯಾಗಿದೆ. ಕಲಘಟಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಗಾಯಾಳುಗಳು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ.
ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಟ್ರಕ್ ಡ್ರೈವರ್ನನ್ನು ವಶಕ್ಕೆ ಪಡೆದಿದ್ದಾರೆ. ಮೃತ ಬಸಮ್ಮ ಮತ್ತು ಗಾಯಾಳುಗಳು ಕಲಘಟಗಿ ತಾಲ್ಲೂಕಿನ ಜಿನ್ನೂರು ಗ್ರಾಮದವರು ಎಂದು ತಿಳಿದುಬಂದಿದೆ.
ಇದನ್ನೂ ಓದಿ : ಕ್ರಿಕೆಟ್ ಜಗತ್ತಿಗೆ ಜಯ್ ಶಾ ಸಾರಥಿ – ಐಸಿಸಿ ನೂತನ ಅಧ್ಯಕ್ಷರಾಗಿ ಅವಿರೋಧ ಆಯ್ಕೆ..!
Post Views: 147