Download Our App

Follow us

Home » ಅಪರಾಧ » ರೇವಣ್ಣಗೆ ಬಿಗ್ ರಿಲೀಫ್ – SIT ಸಲ್ಲಿಸಿರುವ ಅರ್ಜಿ ವಜಾಗೊಳಿಸಿದ ಹೈಕೋರ್ಟ್..!

ರೇವಣ್ಣಗೆ ಬಿಗ್ ರಿಲೀಫ್ – SIT ಸಲ್ಲಿಸಿರುವ ಅರ್ಜಿ ವಜಾಗೊಳಿಸಿದ ಹೈಕೋರ್ಟ್..!

ಬೆಂಗಳೂರು : ಕೆ.ಆರ್.‌ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್​​ಡಿ ರೇವಣ್ಣ ನೀಡಿರುವ ಜಾಮೀನು ರದ್ದು ಕೋರಿ SIT ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ಕೋರ್ಟ್​ ನೀಡಿದ್ದ ಜಾಮೀನು ರದ್ದುಗೊಳಿಸುವಂತೆ ಎಸ್​​ಐಟಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು. ಆದರೆ ಹೈಕೋರ್ಟ್​ ಇಂದು ಎಸ್​ಐಟಿ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಇದರಿಂದ ಎಚ್​ಡಿ ರೇವಣ್ಣಗೆ ಮತ್ತಷ್ಟು ಬಿಗ್ ರಿಲೀಫ್ ಸಿಕ್ಕಿದೆ.

ಸಂತ್ರಸ್ತೆ ಮಹಿಳೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ರೇವಣ್ಣ ಅವರಿಗೆ ಮೇ 13ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತುಬದ್ಧ ಜಾಮೀನು ನೀಡಿತ್ತು. ಬಳಿಕ ಎಸ್​​ಐಟಿ ವಿಶೇಷ ಕೋರ್ಟ್​ನ ಜಾಮೀನು ಆದೇಶ ಪ್ರಶ್ನಿಸಿ ಹೈಕೋರ್ಟ್​ ಮೆಟ್ಟಿಲೇರಿದ್ದು, ರೇವಣ್ಣ ಅವರಿಗೆ ನೀಡಲಾಗಿರುವ ಜಾಮೀನು ರದ್ದು ಮಾಡುವಂತೆ ಮನವಿ ಮಾಡಿತ್ತು. ಆದರೆ ಇದೀಗ ಕೋರ್ಟ್​ ಜಾಮೀನು ರದ್ದುಗೊಳಿಸಲು ನಿರಾಕರಿಸಿದೆ.

ಇದನ್ನೂ ಓದಿ : ಹುಬ್ಬಳ್ಳಿಯಲ್ಲಿ ಟಾಟಾ ಏಸ್-ಟ್ರಕ್ ನಡುವೆ ಭೀಕರ ಅಪಘಾತ : ಓರ್ವ ಮಹಿಳೆ ಸಾವು, 8 ಮಂದಿಗೆ ಗಂಭೀರ ಗಾಯ..!

Leave a Comment

DG Ad

RELATED LATEST NEWS

Top Headlines

ಕಮಲ್ ಹಾಸನ್ ಅಭಿನಯದ ‘ಥಗ್ ಲೈಫ್’ ಚಿತ್ರದ ರಿಲೀಸ್​ ಡೇಟ್​​ ಅನೌನ್ಸ್..!

ಕಮಲ್ ಹಾಸನ್ ಅಭಿನಯದ ಮತ್ತು ಮಣಿರತ್ನಂ ನಿರ್ದೇಶನದ ‘ಥಗ್ ಲೈಫ್’ ಚಿತ್ರ ವಿಶ್ವದಾದ್ಯಂತ 2025ರ ಜೂನ್ 5ರಂದು ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ. ಇಂದು ಕಮಲ್ ಹಾಸನ್ ಅವರ ಹುಟ್ಟುಹಬ್ಬದ

Live Cricket

Add Your Heading Text Here