ಬೆಂಗಳೂರು : ನಟಿ ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಕೇಸ್ನಲ್ಲಿ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ. ಈ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆಯನ್ನ ಆಗಸ್ಟ್ 31ಕ್ಕೆ ಕಾಯ್ದಿರಿಸಿ 57ನೇ ಸಿಸಿಹೆಚ್ ನ್ಯಾಯಾಲಯ ಆದೇಶ ಹೊರಡಿಸಿದೆ.
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಹಲವು ದಿನಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರಾಗೌಡ ‘ಸಿಂಗಲ್ ಪೇರೆಂಟ್’ ಬೇಸ್ ಮೇಲೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸೋ ಮುನ್ನವೇ ಹಿರಿಯ ವಕೀಲ ಟಾಮಿ ಸೆಬಾಸ್ಟಿಯನ್ ಮೂಲಕ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ತನ್ನ ಮಗಳ ಭವಿಷ್ಯ ಹಾಗೂ ಆರೈಕೆ ದೃಷ್ಟಿಯಿಂದ ಬೇಲ್ಗೆ ಅರ್ಜಿ ಸಲ್ಲಿಸಿ, ಪ್ರಕರಣದ ನಂತರ ತನ್ನ ಮಗಳು ಮಾನಸಿಕವಾಗಿ ಕುಗ್ಗಿದ್ದಾಳೆ, ಮಗಳ ಆರೈಕೆ ಹಾಗು ಭವಿಷ್ಯ ರೂಪಿಸುವ ಜವಾಬ್ದಾರಿ ನನ್ನ ಮೇಲಿದೆ. ನನ್ನ ಮಗಳಿಗೆ ನಾನೊಬ್ಬಳೇ ಪೋಷಕಿ ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.
ಇನ್ನು ಈ ಬಗ್ಗೆ ವಿಚಾರಣೆ ನಡೆಸಿದ ಕೋರ್ಟ್, ಎರಡು ಕಡೆಯ ವಾದ-ಪ್ರತಿವಾದ ಆಲಿಸಿದ ಬಳಿಕ ಆಗಸ್ಟ್ 31ಕ್ಕೆ ಆದೇಶ ಕಾಯ್ದಿರಿಸಿ ಆದೇಶ ಹೊರಡಿಸಿದೆ. ಇನ್ನು ಪವಿತ್ರಾಗೌಡ ಸೇರಿ ನಾಲ್ವರು ಆರೋಪಿಗಳ ಜಾಮೀನು ಕೂಡ ಮುಂದೂಡಿಕೆಯಾಗಿದೆ.
ಇದನ್ನೂ ಓದಿ : ಜೈಲಿನಲ್ಲಿ ರಾಜಾತಿಥ್ಯ - ಜೈಲುಗಳ ಸುಧಾರಣೆಗಾಗಿ ಚೀಫ್ ಜಸ್ಟೀಸ್ಗೆ ಸಾಮಾಜಿಕ ಕಾರ್ಯಕರ್ತ ನರಸಿಂಹಮೂರ್ತಿ ಪತ್ರ..!