ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಹಾಗೂ ಸಹಚರ ಖೈದಿಗಳಿಗೆ ಜೈಲಿನಲ್ಲಿ ರಾಜಾತಿಥ್ಯ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಆರೋಪಿಗಳನ್ನು ಆ.29ರಂದು ಬೆಳಗ್ಗಿನ ಜಾವ ಬೇರೆ ಬೇರೆ ಜೈಲಿಗೆ ಸ್ಥಳಾಂತರಿಸಲಾಗಿದೆ. ಕೋರ್ಟ್ ಆದೇಶದನ್ವಯ ನಟ ದರ್ಶನ್ನನ್ನು ಬೆಳಗ್ಗೆ ಸೂರ್ಯೋದಯಕ್ಕೂ ಮುನ್ನ 4.30ಕ್ಕೆ ಪರಪ್ಪನ ಅಗ್ರಹಾರದಿಂದ ಬಳ್ಳಾರಿಯ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ.
ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಒಟ್ಟು 17 ಮಂದಿ ವಿಚಾರಣಾಧೀನ ಖೈದಿಗಳಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲ್ಲಿದ್ದರು. ಇವರಿಗೆ ರಾಜಾತಿಥ್ಯ ಸಿಗುತ್ತಿರುವ ಒಂದಷ್ಟು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಬೆನ್ನಲ್ಲೇ ಎಚ್ಚೆತ್ತುಕೊಂಡ ಕರ್ನಾಟಕ ಗೃಹ ಇಲಾಖೆ ಹಾಗೂ ಪೊಲೀಸರು ನ್ಯಾಯಾಲಯದ ಆದೇಶ ಪಡೆದು, ಇಂದು ರಾಜ್ಯದ ವಿವಿಧ ಜೈಲುಗಳಿಗೆ ಆರೋಪಿಗಳ್ನು ಸ್ಥಳಾಂತರ ಮಾಡಿದ್ದಾರೆ.
ಒಬ್ಬೊಬ್ಬ ಆರೋಪಿಯನ್ನೂ ಒಂದೊಂದು ಜೈಲಿಗೆ ಶಿಫ್ಟ್ ಮಾಡಿದ್ದಾರೆ. 17 ಮಂದಿ ಆರೋಪಿಗಳ ಪೈಕಿ ನಟ ದರ್ಶನ್ನ ಬಳ್ಳಾರಿ ಕಾರಾಗೃಹಕ್ಕೆ ಸ್ಥಳಾಂತರಿಸಿದ್ದಾರೆ. A3 ಪವನ್, A4 ರಾಘವೇಂದ್ರ ಮೈಸೂರು ಜೈಲಿಗೆ, A6 ಜಗದೀಶ್, A12 ಲಕ್ಷ್ಮಣ್ ಶಿವಮೊಗ್ಗ ಜೈಲಿಗೆ, A9 ಧನರಾಜ್ ಶಿಫ್ಟ್ ಧಾರವಾಡ ಜೈಲಿಗೆ, A9 ವಿನಯ್ ವಿಜಯಪುರ ಜೈಲಿಗೆ, A11 ನಾಗರಾಜ್ ಕಲಬುರಗಿ ಜೈಲಿಗೆ, A14 ಪ್ರದೂಷ್ನ್ನು ಬೆಳಗಾವಿ ಜೈಲಿಗೆ ಶಿಫ್ಟ್ ಮಾಡಿದ್ದಾರೆ.
ಇದನ್ನೂ ಓದಿ : ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ಆ. 31ಕ್ಕೆ ಮುಂದೂಡಿಕೆ..!