ಪಿಚ್ಚರ್ ಚಿತ್ರದ “ಗೋಕುಲದ ರಾಧೆ” ಹಾಡು ಹಾಡುವ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್!

ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ ನಿರ್ಮಾಪಕಿ ಶಿಲ್ಪಾ ಗಣೇಶ್ ಅವರು ಪ್ರಸ್ತುತ ಕನ್ನಡ ಹಾಗೂ ತುಳುವಿನಲ್ಲಿ ನಿರ್ಮಿಸಿರುವ ಚಿತ್ರ “ಪಿಚ್ಚರ್”. ಸಂದೀಪ ಬೆದ್ರ ನಿರ್ದೇಶನದ ಈ ಚಿತ್ರದ ನಾಯಕರಾಗಿ ನಿತ್ಯಪ್ರಕಾಶ್ ಬಂಟ್ವಾಳ್ ನಟಿಸಿದ್ದಾರೆ.

ಈ ಚಿತ್ರದ ವಿಶೇಷವೆಂದರೆ ನಿರ್ಮಾಪಕಿ ಶಿಲ್ಪಾ ಗಣೇಶ್ “ಗೋಕುಲದ ರಾಧೆ” ಎಂಬ ಹಾಡನ್ನು ಕನ್ನಡ ಹಾಗೂ ತುಳು ಎರಡು ಭಾಷೆಗಳಲ್ಲೂ ಹಾಡಿದ್ದಾರೆ. ಈ ಮೂಲಕ ನಿರ್ಮಾಪಕಿಯಾಗಿದ್ದ ಶಿಲ್ಪಾ ಗಣೇಶ್ ಅವರು ಈಗ ಗಾಯಕಿಯಾಗಿ ಚಿತ್ರರಂಗ ಪ್ರವೇಶಿಸಿದ್ದಾರೆ. ಶಿಲ್ಪಾ ಗಣೇಶ್ ಹಾಗೂ ಜಸ್ಕರಣ್ ಸಿಂಗ್ ಈ ಹಾಡನ್ನು‌ ಹಾಡಿದ್ದಾರೆ. ಕನ್ನಡದಲ್ಲಿ ಅರಸು ಅಂತಾರೆ ಹಾಗೂ ತುಳುವಿನಲ್ಲಿ ಕೀರ್ತನ್ ಭಂಡಾರಿ ಈ ಹಾಡನ್ನು ರಚಿಸಿದ್ದಾರೆ. ಸ್ಯಾಮ್ಯುಯೆಲ್ ಅಭಿ ಸಂಗೀತ ನೀಡಿದ್ದಾರೆ.

ಕಾಶ್ಮೀರದಲ್ಲಿ ಈ ಹಾಡಿನ ಚಿತ್ರೀಕರಣವಾಗಿದೆ. ಆನಂದ್ ಆಡಿಯೋ ಯೂಟ್ಯೂಬ್ ಚಾನಲ್​ನಲ್ಲಿ ಈ ಹಾಡು ಬಿಡುಗಡೆಯಾಗಿದೆ. ಹಾಡಿಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ.
ಕೌಟುಂಬಿಕ, ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಮನೋರಂಜನೆಯೇ ಪ್ರಧಾನವಾಗಿದೆ. ನಿರ್ದೇಶಕ ಸಂದೀಪ್ ಬೆದ್ರ ಅವರೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ.

ಸಂತೋಷ್ ರೈ ಪಾತಾಜೆ ಹಾಗೂ ಚಂದ್ರಶೇಖರ್ ಕೆ.ಎಸ್ ಅವರ ಛಾಯಾಗ್ರಹಣ, ರಾಜು ಆರ್ಯನ್ ಸಂಕಲನ, ಧನಂಜಯ್.ಬಿ – ಶ್ರೀರಾಜು ನೃತ್ಯ ನಿರ್ದೇಶನ, ರಾಧೇಶ್ – ಸಂತೋಷ್ ಪೂಜಾರಿ ಕಲಾ ನಿರ್ದೇಶನ ಹಾಗೂ ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನವಿರುವ ಈ ಚಿತ್ರಕ್ಕೆ ಮೋಹನ್ ಭಟ್ಕಳ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ.

ನಿತ್ಯಪ್ರಕಾಶ್ ಬಂಟ್ವಾಳ್ “ಪಿಚ್ಚರ್” ಚಿತ್ರದ ನಾಯಕನಾಗಿದ್ದು, ನಾಯಕಿಯಾಗಿ ಅಮೃತ ಸುದು ಅಭಿನಯಿಸಿದ್ದಾರೆ. ದೇವದಾಸ್ ಕಾಪಿಕಾಡ್, ನವೀನ್ ಡಿ ಪಡೀಲ್, ಅರವಿಂದ್ ಬೋಳಾರ್, ಭೋಜರಾಜ್ ವಾಮಂಜೂರ್, ಸಾಯಿಕೃಷ್ಣ, ವಜ್ರಧೀರ್ ಜೈನ್, ಸದಾಶಿವ ಅಮಿನ್, ಪ್ರಸನ್ನ ಶೆಟ್ಟಿ ಬೈಲೂರ್, ಸಂದೀಪ್ ಶೆಟ್ಟಿ ಮಾಣಿ, ಉಮೇಶ್ ಮಿಜಾರ್, ಜಯಶೀಲ ಮರೊಲಿ, ರೂಪ ವರ್ಕಾಡಿ, ರವಿ ರಾಮಕುಂಜ, ಪುಷ್ಪರಾಜ್ ಬೊಳಾರ್, ಅನಿಲ್ ಉಪ್ಪಳ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ : ಅಂಜನಾದ್ರಿ ಆಂಜನೇಯನಿಗೆ ನಕಲಿ ಚಿನ್ನ ಕೊಟ್ಟ ಮಹೇಶ್ ರೆಡ್ಡಿ ಮತ್ತು ಜನಾರ್ದನ ರೆಡ್ಡಿ!

Btv Kannada
Author: Btv Kannada

Leave a Comment

Read More