ಉತ್ತರಾಖಂಡ : ದುರಸ್ತಿಗಾಗಿ ಎತ್ತಿಕೊಂಡು ಸಾಗುತ್ತಿದ್ದಾಗ ಖಾಸಗಿ ಹೆಲಿಕಾಪ್ಟರ್ ಪತನಗೊಂಡ ಘಟನೆ ಉತ್ತರಾಖಂಡದ ಕೇದಾರನಾಥದಲ್ಲಿ ನಡೆದಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಆಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೇದಾರನಾಥ ದೇಗುಲಕ್ಕೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ವೇಳೆ ಹೆಲಿಕಾಪ್ಟರ್ವೊಂದು ತಾಂತ್ರಿಕ ದೋಷದಿಂದಾಗಿ ತುರ್ತು ಭೂಸ್ಪರ್ಶ ಮಾಡಿತ್ತು. ಲ್ಯಾಂಡಿಂಗ್ ಸಮಯದಲ್ಲಿ ಹಾನಿಗೊಳಗಾದ ಹೆಲಿಕಾಪ್ಟರ್ ಅನ್ನು ಎಂಐ-17 ಹೆಲಿಕಾಪ್ಟರ್ ಎತ್ತಿಕೊಂಡು ಸಾಗುತ್ತಿತ್ತು. ಈ ವೇಳೆ ಹೆಲಿಕಾಪ್ಟರ್ ಜಾರಿ ಬಿದ್ದು ಮಂದಾಕಿನಿ ನದಿಯ ಬಳಿ ಪತನಗೊಂಡಿದೆ.
ಎಸ್‌ಡಿಆರ್‌ಎಫ್ ತಂಡವು ಘಟನಾ ಸ್ಥಳಕ್ಕೆ ಧಾವಿಸಿದ್ದು, ಪರಿಶಿಲನೆ ನಡೆಸಿದ್ದಾರೆ. ಈ ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಘಟನೆಯ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಇದನ್ನೂ ಓದಿ : ನಟ ದರ್ಶನ್ಗೆ ಜೈಲಲ್ಲಿ ರಾಜಾತಿಥ್ಯ ಪ್ರಕರಣ – ಪರಪ್ಪನ ಅಗ್ರಹಾರ ಜೈಲು ಸಿಬ್ಬಂದಿ ಪ್ರತಿಭಟನೆ..!