Download Our App

Follow us

Home » ಅಪರಾಧ » ವಾಲ್ಮೀಕಿ ಹಗರಣ – ಇಂದು ಮಾಜಿ ಸಚಿವ ಬಿ.ನಾಗೇಂದ್ರ ಅರ್ಜಿ ವಿಚಾರಣೆ..!

ವಾಲ್ಮೀಕಿ ಹಗರಣ – ಇಂದು ಮಾಜಿ ಸಚಿವ ಬಿ.ನಾಗೇಂದ್ರ ಅರ್ಜಿ ವಿಚಾರಣೆ..!

ಬೆಂಗಳೂರು : ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಸಂಬಂಧ ಇಂದು ಮಾಜಿ ಸಚಿವ ಬಿ.ನಾಗೇಂದ್ರ ಅರ್ಜಿ ವಿಚಾರಣೆ ನಡೆಯಲಿದೆ. ಆ.28ರಂದು ನಾಗೇಂದ್ರ ಮನೆ, ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದರು. ನಾಗೇಂದ್ರನನ್ನು ಇಡಿ ಟೀಂ ಅರೆಸ್ಟ್ ಮಾಡಿ ಸುದೀರ್ಘ ವಿಚಾರಣೆ ನಡೆಸಿತ್ತು.

ಬಳ್ಳಾರಿ, ಕೊಪ್ಪಳ ಹಾಗೂ ರಾಯಚೂರಿನ ವಿವಿಧೆಡೆ ದಾಳಿ ನಡೆಸಿದ್ದಾರೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಅರ್ಜಿ ವಿಚಾರಣೆ ನಡೆಯಲಿದ್ದು, ED ಜಾಮೀನು ಅರ್ಜಿಗೆ ಆಕ್ಷೇಷಣೆ ಸಲ್ಲಿಸಲಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಸಂಬಂಧಿಸಿದ ಬ್ಯಾಂಕ್ ಖಾತೆಯಿಂದ 18 ಖಾತೆಗಳಿಗೆ ಬರೋಬ್ಬರಿ 94.73 ಕೋಟಿ ರೂಪಾಯಿ ಅಕ್ರಮವಾಗಿ ವರ್ಗಾವಣೆಯಾಗಿತ್ತು. ಈ ಸಂಬಂಧ ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್‌ಐಟಿ ಕೂಡ ರಚಿಸಿತ್ತು. ಹಗರಣ ಸಂಬಂಧ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ್, ಮಾಜಿ ಸಚಿವ ಬಿ.ನಾಗೇಂದ್ರನನ್ನು ಎಸ್‌ಐಟಿ ಬಂಧಿಸಿತ್ತು.

ಇದೇ ಕೇಸ್‌ ಸಂಬಂಧ ಇಡಿ ಅಧಿಕಾರಿಗಳು ಕಳೆದ ತಿಂಗಳು ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್​​ ಹಾಗೂ ಬಿ. ನಾಗೇಂದ್ರ ಅವರ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿತ್ತು. ಬೆಂಗಳೂರಿನ ಡಾಲರ್ಸ್‌ ಕಾಲೋನಿಯಲ್ಲಿದ್ದ ಬಿ.ನಾಗೇಂದ್ರ ಅವರ ಫ್ಲ್ಯಾಟ್‌ ಸೇರಿದಂತೆ ಏಕಕಾಲಕ್ಕೆ 18 ಕಡೆ ದಾಳಿ ನಡೆದಿತ್ತು. ಬೆಂಗಳೂರಿನ ಎಂ.ಜಿ ರಸ್ತೆಯಲ್ಲಿರುವ ಯೂನಿಯನ್ ಬ್ಯಾಂಕ್ ಕಚೇರಿಯನ್ನೂ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು.

ಇದನ್ನೂ ಓದಿ : ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್​ಗೆ ಜನ್ಮದಿನದ ಸಂಭ್ರಮ – 51ನೇ ವಸಂತಕ್ಕೆ ಕಾಲಿಟ್ಟ ಬಾದ್​​ಷಾ..!

Leave a Comment

DG Ad

RELATED LATEST NEWS

Top Headlines

ಕಮಲ್ ಹಾಸನ್ ಅಭಿನಯದ ‘ಥಗ್ ಲೈಫ್’ ಚಿತ್ರದ ರಿಲೀಸ್​ ಡೇಟ್​​ ಅನೌನ್ಸ್..!

ಕಮಲ್ ಹಾಸನ್ ಅಭಿನಯದ ಮತ್ತು ಮಣಿರತ್ನಂ ನಿರ್ದೇಶನದ ‘ಥಗ್ ಲೈಫ್’ ಚಿತ್ರ ವಿಶ್ವದಾದ್ಯಂತ 2025ರ ಜೂನ್ 5ರಂದು ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ. ಇಂದು ಕಮಲ್ ಹಾಸನ್ ಅವರ ಹುಟ್ಟುಹಬ್ಬದ

Live Cricket

Add Your Heading Text Here