ನವದೆಹಲಿ : ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಇಂದು ಗುರುಗಾಂವ್ನ ಮೇದಾಂತ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಣ್ಣ ಶಸ್ತ್ರಚಿಕಿತ್ಸೆ ಹಿನ್ನಲೆಯಲ್ಲಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದು, ಹರ್ಯಾಣದ ಗುರುಗ್ರಾಮದಲ್ಲಿರುವ ಮೇದಾಂತ ಆಸ್ಪತ್ರೆಯಲ್ಲಿ ಸೋನಿಯಾ ಗಾಂಧಿಗೆ ಚಿಕಿತ್ಸೆ ಮುಂದುವರಿದಿದೆ.
ಈ ಹಿಂದೆ, ಮಾರ್ಚ್ 25 ರಂದು, ಸೋನಿಯಾ ಗಾಂಧಿ ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದರು. ಹವಾಮಾನದಲ್ಲಿನ ದಿಢೀರ್ ಬದಲಾವಣೆಯಿಂದ ಅಸ್ವಸ್ಥಗೊಂಡ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಅವರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದರು.
ಇದೀಗ ಶಸ್ತ್ರಚಿಕಿತ್ಸೆಗೆ ಒಳಗಾಗಲು ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇದನ್ನೂ ಓದಿ : ವಂದೇ ಭಾರತ್ ರೈಲಿನಲ್ಲಿ 700 ರೂ. ಟಿಕೆಟ್ 380ಕ್ಕೆ ಡೀಲ್ – ಟಿಟಿಇ ಅಮಾನತು!
Author: Btv Kannada
Post Views: 431









