ಆಂಧ್ರಪ್ರದೇಶ : ಆಂಧ್ರಪ್ರದೇಶದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಬ್ಬರಿಸುತ್ತಿರುವ ಮಳೆಯ ಹೊಡೆತಕ್ಕೆ ಈವರೆಗೂ 40ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 5 ಲಕ್ಷ ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಶಿಫ್ಟ್ ಮಾಡಲಾಗಿದೆ.
6 ಲಕ್ಷ ಹೆಕ್ಟೇರ್ನಲ್ಲಿ ಬೆಳೆ ಸಂಪೂರ್ಣ ನಾಶವಾಗಿದೆ. ವಿಜಯವಾಡ, ಪ್ರಕಾಶಂ, ಕಮ್ಮಂ ಸೇರಿದಂತೆ ಹಲವು ಕಡೆ ಭಾರೀ ಅನಾಹುತ ಸಂಭವಿಸಿದೆ. ಕೃಷ್ಣ, ಗೋದಾವರಿ ಸೇರಿ ಹಲವು ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ಆಂಧ್ರಪ್ರದೇಶ, ತೆಲಂಗಾಣದಲ್ಲಿ ಕಳೆದ ಮೂರು ದಿನಗಳಿಂದಲೂ ಮಳೆಯ ಅಬ್ಬರ ಹೆಚ್ಚಾಗಿದೆ.
1991ರ ನಂತರ ವಿಜಯವಾಡ ಭಾಗದಲ್ಲಿ ದಾಖಲೆಯ ಮಳೆ ಸುರಿದಿದೆ. ಖುದ್ದು ಸಿಎಂ ಚಂದ್ರಬಾಬು ನಾಯ್ಡು ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ಕಾರ್ಯಗಳನ್ನು ವೀಕ್ಷಣೆ ಮಾಡುತ್ತಿದ್ದಾರೆ. ಇನ್ನು ಮಳೆಹಾನಿಯಿಂದಾಗಿ ಸುಮಾರು 400ಕ್ಕೂ ಹೆಚ್ಚು ರೈಲುಗಳ ಸಂಚಾರ ಅಸ್ತವ್ಯಸ್ತವಾಗಿದೆ. 100 ರೈಲುಗಳನ್ನು ಸಂಪೂರ್ಣ ರದ್ದು ಮಾಡಲಾಗಿದೆ.
ಇದನ್ನೂ ಓದಿ : ‘ಮೆಜೆಸ್ಟಿಕ್-2’ ಚಿತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ – ಬಹುವರ್ಷಗಳ ಬಳಿಕ ಭರ್ಜರಿಯಾಗಿ ಸ್ಟೆಪ್ ಹಾಕಿದ ಆ್ಯಕ್ಷನ್ ಕ್ವೀನ್..!