ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವ್ರ ಅಪ್ಪನ ಮನೆ ಆಸ್ತೀನಾ ಎಂದು ತಾವು ನೀಡಿದ್ದ ಹೇಳಿಕೆಯನ್ನು ಬಿಜೆಪಿ ಶಾಸಕ ಹಾಗೂ ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ವಾಪಸ್ ಪಡೆದಿದ್ದಾರೆ.
ಅರವಿಂದ್ ಬೆಲ್ಲದ್ ಧಾರವಾಡದಲ್ಲಿ ಮಾತನಾಡಿ, ಸಿದ್ದರಾಮಯ್ಯನವರದ್ದು ಏನು ಅಪ್ಪನ ಮನೆಯ ಆಸ್ತಿನಾ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯನವರಿಗೆ ಅರವಿಂದ್ ಬೆಲ್ಲದ್ ಅವರು ಪತ್ರ ಬರೆದು ಕ್ಷಮೆ ಕೇಳಿದ್ದಾರೆ.
ಜಿಂದಾಲ್‌ಗೆ ಭೂಮಿ ಕೊಟ್ಟಿದ್ದಾರೆ. ಮಾರುಕಟ್ಟೆ ಮೌಲ್ಯದ ಒಂದು ಭಾಗಕ್ಕೆ ಬೆಲೆಬಾಳುವ ಸರ್ಕಾರಿ ಭೂಮಿಯನ್ನು ಮಾರಾಟ ಮಾಡಿದ್ದಾರೆ. ಈ ಮೂಲಕ ಇನ್ನೊಂದು ಹಗರಣವನ್ನು ಮಾಡುತ್ತಿದ್ದಾರೆ. ಈ ಭೂಮಿ ಸಿದ್ದರಾಮಯ್ಯನವರ ಅಪ್ಪನ ಮನೆ ಆಸ್ತಿನಾ ಎಂದು ಸಿಎಂ ವಿರುದ್ಧ ಬೆಲ್ಲದ್ ಹರಿಹಾಯ್ದಿದ್ದರು. ಇದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇದಾದ ನಂತ್ರ ಪತ್ರದ ಮೂಲಕ ಬೆಲ್ಲದ್ ಕ್ಷಮೆಯಾಚನೆ ಮಾಡಿದ್ದಾರೆ.
ಇದನ್ನೂ ಓದಿ : ಆಂಧ್ರಪ್ರದೇಶದಲ್ಲಿ ಮಳೆಯ ಅಬ್ಬರ – ಈವರೆಗೂ 40ಕ್ಕೂ ಹೆಚ್ಚು ಮಂದಿ ಸಾ*ವು..!
Post Views: 333