ಬೆಂಗಳೂರು : ನಗರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ಮಂಗಳವಾರ ಟೀಂ ಇಂಡಿಯಾ ಮಾಜಿ ಹೆಡ್ ಕೋಚ್, ಕನ್ನಡಿಗ ರಾಹುಲ್ ದ್ರಾವಿಡ್ ಅವರ ಕಾರಿಗೆ ಗೂಡ್ಸ್ ಆಟೋವೊಂದು ಡಿಕ್ಕಿ ಹೊಡೆದಿದೆ. ಕಾರಿಗೆ ಗೂಡ್ಸ್ ಆಟೋ ಟಚ್ ಆದ ಬಳಿಕ ರಾಹುಲ್ ದ್ರಾವಿಡ್ ಕಾರಿನಿಂದ ಕೆಳಗಿಳಿದು ಪರಿಶೀಲನೆ ನಡೆಸಿದ್ದು, ಈ ವೇಳೆ ದ್ರಾವಿಡ್ ಹಾಗೂ ಗೂಡ್ಸ್ ಆಟೋ ಚಾಲಕನ ಮಧ್ಯೆ ಸಣ್ಣ ವಾಗ್ವಾದ ನಡೆದಿದೆ.

ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದ್ದು, ಯಾರಿಗೂ ಯಾವುದೇ ಗಾಯಗಳಾಗಿಲ್ಲ. ಹೀಗಾಗಿ ಘಟನೆ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ.

ಇನ್ನು ಘಟನೆಯಲ್ಲಿ ಆಟೋ ಚಾಲಕನದ್ದು ತಪ್ಪಾ ಅಥವಾ ದ್ರಾವಿಡ್ ಅವರದ್ದು ತಪ್ಪಾ ಎನ್ನುವುದು ಸ್ಪಷ್ಟವಾಗಿ ತಿಳಿದುಬಂದಿಲ್ಲ. ಸದ್ಯ ರಾಹುಲ್ ದ್ರಾವಿಡ್, ಗೂಡ್ಸ್ ಆಟೋ ಚಾಲಕನ ನಂಬರ್ ಪಡೆದು ತೆರಳಿದ್ದಾರೆ ಎಂದು ತಿಳಿದುಬಂದಿದೆ. ಆಟೋ ಚಾಲಕನ ಜೊತೆ ರಾಹುಲ್ ದ್ರಾವಿಡ್ ಅವರು ಮಾತುಕತೆ ನಡೆಸಿದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.
Author: Btv Kannada
Post Views: 39









