ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ!

ತಿರುವನಂತಪುರಂ: ಕೇರಳ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರ ಹೆಸರನ್ನು ಘೋಷಣೆ ಮಾಡಲಾಗಿದೆ.

ಕೇರಳ ಕಾಂಗ್ರೆಸ್ ನಾಯಕರಾದ ಕೆ.ಸಿ ವೇಣುಗೋಪಾಲ್,  ವಿ.ಡಿ ಸತೀಶನ್ ಮತ್ತು ರಮೇಶ್ ಚೆನ್ನಿತ್ತಲ ಹೆಸರುಗಳು ಪ್ರಮುಖವಾಗಿ ಸಿಎಂ ರೇಸ್​​ನಲ್ಲಿದ್ದವು. ಆದರೆ ಈ ಪೈಕಿ ವಿ.ಡಿ.ಸತೀಶನ್ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ.

ಏಪ್ರಿಲ್​​ 9ರಂದು ಕೇರಳ ವಿಧಾನಸಭಾ ಚುನಾವಣೆ ನಡೆದಿದ್ದು, ಇದರ ಫಲಿತಾಂಶ ಮೇ 4ರಂದು ಪ್ರಕಟಗೊಂಡಿತ್ತು. ಕಾಂಗ್ರೆಸ್ ನೇತೃತ್ವದ ಯುಡಿಎಫ್ 140 ವಿಧಾನಸಭಾ ಸ್ಥಾನಗಳ ಪೈಕಿ 102 ಸ್ಥಾನಗಳನ್ನು ಗೆಲ್ಲುವ ಮೂಲಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆಡಳಿತಾರೂಢ ಎಲ್​​ಡಿಎಫ್​​ ಕೇವಲ 35 ಸ್ಥಾನಗಳನ್ನು ಪಡೆಯುವ ಮೂಲಕ ಹೀನಾಯ ಸೋಲುಂಡಿತ್ತು. ಹೀಗಿದ್ದರೂ ನೂತನ ಸಿಎಂ ಆಯ್ಕೆಗೆ ಬರೋಬ್ಬರಿ 10 ದಿನಗಳನ್ನು ಕಾಂಗ್ರೆಸ್​​ ನಾಯಕರು ತೆಗೆದುಕೊಂಡಿದ್ದಾರೆ.

ಕೇರಳ ರಾಜ್ಯದ ನೂತನ ಸಿಎಂ ಆಗಿ ವಿ.ಡಿ.ಸತೀಶನ್​ ಆಯ್ಕೆ ಬೆನ್ನಲ್ಲೇ ತಿರುವನಂತಪುರಂನಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣೆ ನಡೆದಿದೆ.

ಇದನ್ನೂ ಓದಿ : ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ ಮುನ್ಸೂಚನೆ ನೀಡಿದ ಆರ್‌ಬಿಐ ಗವರ್ನರ್!

Btv Kannada
Author: Btv Kannada

Leave a Comment

Read More