ಬೆಂಗಳೂರು : ರಾಜ್ಯದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯ ಮೊದಲ ಹಂತ ಇಂದು ಲೋಕಾರ್ಪಣೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡನಗರದ ವಿತರಣಾ ತೊಟ್ಟಿ 3ರಲ್ಲಿ ನೀರೆತ್ತುವ ಪಂಪ್ ಹಾಗೂ ಮೋಟಾರ್ಗಳನ್ನು ಆನ್ ಮಾಡುವ ಮೂಲಕ ಯೋಜನೆಯ ಮೊದಲ ಹಂತವನ್ನು ಲೋಕಾರ್ಪಣೆಗೊಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಲಸಂಪನ್ಮೂಲ ಸಚಿವರೂ ಆದ ಡಿಸಿಎಂ ಡಿಕೆಶಿ, ಸಚಿವರಾದ ಡಾ.ಜಿ.ಪರಮೇಶ್ವರ್, ಎಂ.ಬಿ.ಪಾಟೀಲ್,ಕೆ.ಎನ್.ರಾಜಣ್ಣ, ಸಂಸದರು ಹಾಗೂ ಶಾಸಕರು ಸೇರಿ ಹಲವರು ಸಾಥ್ ನೀಡಿದ್ದಾರೆ.
ಇದು ಬರೊಬ್ಬರಿ 23 ಸಾವಿರ ಕೋಟಿ ವೆಚ್ಚದ ಯೋಜನೆಯಾಗಿದ್ದು ಹಾಸನ ಜಿಲ್ಲೆಯ ಸಕಲೇಶಫುರ ತಾಲ್ಲೂಕಿನ ವ್ಯಾಪ್ತಿಯ ಪಶ್ಚಿಮಘಟ್ಟದಲ್ಲಿ ಹುಟ್ಟಿ ಹರಿಯುವ ಎತ್ತಿನಹೊಳೆ ಹಾಗೂ ಸುತ್ತಮುತ್ತಲ ಹಳ್ಳಗಳಿಂದ ನೀರನ್ನು ಮೆಲೆತ್ತಿ ಬೆಂಗಳೂರು ಗ್ರಾಮಾಂತರ ಸೇರಿದಂತೆ ಬಯಲು ಸೀಮೆಯ 7 ಜಿಲ್ಲೆಗಳಿಗೆ ಪೂರೈಸುವುದಕ್ಕೆ ಸಂಬಂಧಿಸಿದ ಯೋಜನೆ ಇದಾಗಿದೆ.
ಇದನ್ನೂ ಓದಿ : ಸ್ಯಾಂಡಲ್ವುಡ್ನಲ್ಲೂ ಕಾಸ್ಟಿಂಗ್ ಕೌಚ್ ಸದ್ದು : ನಟ-ನಟಿಯರು ಸರ್ಕಾರಕ್ಕೆ ಮೊರೆ ಹೋದ ಬೆನ್ನಲ್ಲೇ ಮಹಿಳಾ ಆಯೋಗ ಅಲರ್ಟ್..!