ಧಾರವಾಡ : ಧಾರವಾಡದ ಕಮಲಾಪುರ-ಯಾದವಾಡ ರಸ್ತೆಯಲ್ಲಿ ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಸವಾರರು ಸುಮಾರು 6 ಅಡಿ ಹಾರಿ ರಸ್ತೆಗೆ ಬಿದ್ದಿದ್ದಾರೆ.
ಕಮಲಾಪುರ-ಯಾದವಾಡ ರಸ್ತೆಯಲ್ಲಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಸವಾರರು ಸುಮಾರು 6 ಅಡಿ ಹಾರಿ ರಸ್ತೆಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಧಾರವಾಡ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಖರ ಕಾರಣ ತಿಳಿಯಲು ತನಿಖೆ ಕೈಗೊಳ್ಳಲಾಗಿದೆ.
ಇದನ್ನೂ ಓದಿ : ಮುಮರೆಡ್ಡಿಕೊಪ್ಪದಲ್ಲಿ ಕಳ್ಳರ ಅಟ್ಟಹಾಸ – ದೇವಿಯ 12 ಗ್ರಾಂ ಚಿನ್ನದ ಪಾದಗಳು ಕಳವು!
Author: Btv Kannada
Post Views: 209







