ಮದ್ಯ ಖರೀದಿಗೆ 21 ವರ್ಷ ಕಡ್ಡಾಯ – ಸಿಎಂ ವಿಜಯ್ ಸರ್ಕಾರ ಆದೇಶ!

ಚೆನ್ನೈ: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ವಿಜಯ್ ಸರ್ಕಾರ ರಾಜ್ಯದಲ್ಲಿ ಮದ್ಯಪಾನದ ನಿಯಮಗಳನ್ನು ಕಠಿಣಗೊಳಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ನು ಮುಂದೆ ಮದ್ಯ ಖರೀದಿ, ಮಾರಾಟ ಮಾಡಲು ಕನಿಷ್ಠ 21 ವರ್ಷ ನಿಗದಿಪಡಿಸಿ ಆದೇಶ ಹೊರಡಿಸಿದೆ.

ಗ್ರಾಹಕರ ವಯಸ್ಸನ್ನು ಕಟ್ಟುನಿಟ್ಟಾಗಿ ಪರಿಶೀಲಿಸಬೇಕು. ಅನುಮಾನ ಬಂದಲ್ಲಿ ಆಧಾರ್ ಕಾರ್ಡ್ ಸೇರಿದಂತೆ ಗುರುತಿನ ಚೀಟಿಗಳನ್ನು ಪರಿಶೀಲಿಸಿ, 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡಬಾರದು ಎಂದು ತಮಿಳುನಾಡು ರಾಜ್ಯ ಮಾರುಕಟ್ಟೆ ನಿಗಮ ಅಂಗಡಿಗಳ ಸಿಬ್ಬಂದಿಗೆ ಸೂಚನೆ ನೀಡಿದೆ.

ಇದೇ ವೇಳೆ ಮದ್ಯದಂಗಡಿಗಳ ಕಾರ್ಯಾಚರಣೆ ಸಮಯವನ್ನು ಕಡಿಮೆ ಮಾಡುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಪ್ರಸ್ತುತ ಮಧ್ಯಾಹ್ನ 12ರಿಂದ ರಾತ್ರಿ 10ರವರೆಗೆ ಕಾರ್ಯನಿರ್ವಹಿಸುತ್ತಿರುವ ಅಂಗಡಿಗಳನ್ನು ರಾತ್ರಿ 8 ಗಂಟೆಗೆ ಮುಚ್ಚುವ ಪ್ರಸ್ತಾಪವೂ ಚರ್ಚೆಯಲ್ಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈಗಾಗಲೇ ದೇವಾಲಯಗಳು, ಶಿಕ್ಷಣ ಸಂಸ್ಥೆಗಳು ಹಾಗೂ ಬಸ್ ನಿಲ್ದಾಣಗಳ ಸಮೀಪದಲ್ಲಿದ್ದ 717 TASMAC ಮದ್ಯದಂಗಡಿಗಳನ್ನು ಮುಚ್ಚಲು ಸರ್ಕಾರ ಆದೇಶಿಸಿದ ಬೆನ್ನಲ್ಲೇ ಈ ಕ್ರಮ ಕೈಗೊಂಡಿದೆ.

ಇದನ್ನೂ ಓದಿ : ವೇಣುಗೋಪಾಲ್​ಗೆ ತಪ್ಪಿದ ಮುಖ್ಯಮಂತ್ರಿ ಸ್ಥಾನ – ಸಚಿವ ದಿನೇಶ್ ಗುಂಡೂರಾವ್ ಪತ್ನಿ ತಬುರಾವ್ ಅಸಮಾಧಾನ!

Btv Kannada
Author: Btv Kannada

Leave a Comment

Read More