ಬೆಂಗಳೂರು : ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬೆನ್ನಲ್ಲೇ ಸಿಎನ್‌ಜಿ ದರದಲ್ಲಿ ಪ್ರತಿ ಕೆಜಿಗೆ 2 ರೂಪಾಯಿ ಏರಿಕೆಯಾಗಿದೆ.
ಅಂತರಾಷ್ಟ್ರೀಯ ಮಟ್ಟದಲ್ಲಿ ಹಾರ್ಮುಜ್ ಜಲಸಂಧಿಯ ದಿಗ್ಬಂಧನದಿಂದಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ದೇಶಾದ್ಯಂತ ಸಿಎನ್‌ಜಿ ದರದಲ್ಲಿ ಪ್ರತಿ ಕೆಜಿಗೆ 2 ರೂಪಾಯಿ ಏರಿಕೆ ಮಾಡಲಾಗಿದೆ. ಪರಿಷ್ಕೃತ ದರ ಇಂದು ಬೆಳಗ್ಗೆಯಿಂದಲೇ ಜಾರಿಯಾಗಿದೆ.
ಬೆಂಗಳೂರಿನಲ್ಲಿ 1 ಕೆಜಿ ಸಿಎನ್‌ಜಿ ದರ 93 ರೂ.ಗೆ ಏರಿಕೆಯಾಗಿದ್ದು, ದೆಹಲಿಯಲ್ಲಿ ಸಿಎನ್‌ಜಿ ಬೆಲೆ ಪ್ರತಿ ಕೆಜಿಗೆ 77.09 ರೂ.ನಿಂದ 79.09 ರೂ. ಗೆ ಏರಿಕೆಯಾಗಿದೆ. ಇನ್ನು ಮುಂಬೈನಲ್ಲಿ ಮಹಾನಗರ ಗ್ಯಾಸ್ ಲಿಮಿಟೆಡ್ (MGL) ಈಗಾಗಲೇ ದರ ಹೆಚ್ಚಳ ಮಾಡಿದ್ದು, ಅಲ್ಲಿನ ಬೆಲೆ ಈಗ ಪ್ರತಿ ಕೆಜಿಗೆ 84 ರೂ. ತಲುಪಿದೆ.
ಸಿಎನ್‌ಜಿ ದರ ಏರಿಕೆಯಿಂದಾಗಿ ಆಟೋರಿಕ್ಷಾ, ಕ್ಯಾಬ್ಗಳ ಬಾಡಿಗೆ ಏರಿಕೆಯಾಗಲಿದೆ.
ಇದನ್ನೂ ಓದಿ : ಇಂದು ನಟ ದರ್ಶನ್ ಜಾಮೀನು ಭವಿಷ್ಯ ನಿರ್ಧಾರ – ಸುಪ್ರೀಂ ಕೋರ್ಟ್‌ನಿಂದ ಸಿಗುತ್ತಾ ಗುಡ್ನ್ಯೂಸ್?
Author: Btv Kannada
Post Views: 410









