ಜೂನ್ 21ಕ್ಕೆ ನೀಟ್-ಯುಜಿ ಮರು ಪರೀಕ್ಷೆ!

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ರದ್ದಾಗಿದ್ದ ನೀಟ್ ಯುಜಿ 2026 ಪರೀಕ್ಷೆಯ ಮರುಪರೀಕ್ಷೆಯನ್ನು ಜೂನ್ 21 ರಂದು ನಡೆಸುವುದಾಗಿ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು (NTA) ಅಧಿಕೃತವಾಗಿ ತಿಳಿಸಿದೆ.

ರದ್ದುಗೊಂಡಿರುವ ನೀಟ್ ಪರೀಕ್ಷೆಯನ್ನು ಮತ್ತೆ ಯಾವಾಗ ನಡೆಸಬಹುದು ಮತ್ತು ಭವಿಷ್ಯದಲ್ಲಿ ಇಂತಹ ಸೋರಿಕೆ ತಡೆಯಲು ಕೈಗೊಳ್ಳಬೇಕಾದ ಕಟ್ಟುನಿಟ್ಟಿನ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಶಿಕ್ಷಣ ಇಲಾಖೆಯ ಕಾರ್ಯದರ್ಶಿಗಳು, ಎನ್‌ಟಿಎ ಮಹಾನಿರ್ದೇಶಕರು ಮತ್ತು ಸಿಬಿಎಸ್‌ಇ ಅಧ್ಯಕ್ಷರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.

ಕೇಂದ್ರೀಯ ತನಿಖಾ ದಳ ಈಗ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ನಡೆಸುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಈಗಾಗಲೇ ಐವರು ಆರೋಪಿಗಳನ್ನು ಕಸ್ಟಡಿಗೆ ಪಡೆದಿದ್ದು, ಇನ್ನೂ ಇಬ್ಬರು ಶಂಕಿತರನ್ನು ಬಂಧಿಸಿದೆ.

ಇದನ್ನೂ ಓದಿ : ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬೆನ್ನಲ್ಲೇ ಸಿಎನ್​ಜಿ ದರವೂ ಹೆಚ್ಚಳ!

Btv Kannada
Author: Btv Kannada

Leave a Comment

Read More