ವಿಜಯಪುರ : ಭಾರೀ ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಆಲಮೇಲ ತಾಲೂಕಿನ ಮೊರಟಗಿ ಗ್ರಾಮದಲ್ಲಿ ನಡೆದಿದೆ.
ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರ (28), ಕಾಳಮ್ಮ ಬಡಿಗೇರ (13) ಹಾಗೂ ಕೀರ್ತಿ ಬಡಿಗೇರ (9) ಮೃತಪಟ್ಟ ದುರ್ದೈವಿಗಳು. ಗುರುನಾಥ್ ತಮ್ಮ ಸ್ವಂತ ಮನೆಯನ್ನು ದುರಸ್ಥಿ ಮಾಡಿಸುತ್ತಿದ್ದ ಕಾರಣ ಹಳೆಯ ಮನೆಯೊಂದರಲ್ಲಿ ಬಾಡಿಗೆಗೆ ಇದ್ದರು. ಗುರುವಾರ ರಾತ್ರಿ ಸುರಿದ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದು, ಈ ದುರಂತ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಸಿಂದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ನಾಲ್ವರ ಶವ ಹೊರ ತೆಗೆಯಲು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ನಟ ದರ್ಶನ್ಗೆ ಸುಪ್ರೀಂನಲ್ಲೂ ಜಾಮೀನು ನಿರಾಕರಣೆ – ಇನ್ನೂ 1 ವರ್ಷ ಜೈಲೇ ಗತಿ!
Author: Btv Kannada
Post Views: 386








