Download Our App

Follow us

Home » ರಾಜಕೀಯ » ಕೋವಿಡ್​​ ಸೆಂಟರ್​ ನಿರ್ವಹಣೆಯಲ್ಲಿ ಅಕ್ರಮ ಆರೋಪ – ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಸಿಎಂಗೆ ಪತ್ರ ಬರೆದ ಮಾಜಿ ಶಾಸಕ ಆರ್​.ಮಂಜುನಾಥ್..!

ಕೋವಿಡ್​​ ಸೆಂಟರ್​ ನಿರ್ವಹಣೆಯಲ್ಲಿ ಅಕ್ರಮ ಆರೋಪ – ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಸಿಎಂಗೆ ಪತ್ರ ಬರೆದ ಮಾಜಿ ಶಾಸಕ ಆರ್​.ಮಂಜುನಾಥ್..!

ಬೆಂಗಳೂರು : ಬಿಬಿಎಂಪಿಯ ದಾಸರಹಳ್ಳಿ ವಲಯದಲ್ಲಿ ಕೋವಿಡ್‌ ನಿರ್ವಹಣಾ ವೆಚ್ಚಗಳ ಪಾವತಿಯಲ್ಲಿ ಅಕ್ರಮ ನಡೆದಿದ್ದು, ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಆರ್. ಮಂಜುನಾಥ್​ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

2020ರಲ್ಲಿ ಕೋವಿಡ್ ರೋಗಿಗಳ ಆರೈಕೆಗಾಗಿ ಬಿಬಿಎಂಪಿ ದಾಸರಹಳ್ಳಿ ವಲಯದ ವ್ಯಾಪ್ತಿಯ ಬೆಂಗಳೂರು ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ(ಬಿಐಇಸಿ) 10,100 ಹಾಸಿಗೆಗಳ ಸಾಮರ್ಥ್ಯದ ಕೋವಿಡ್‌ ಆರೈಕೆ ಕೇಂದ್ರ ತೆರೆಯಲಾಗಿತ್ತು. ಈ ಕೇಂದ್ರಕ್ಕೆ ಸಂಬಂಧಿಸಿದಂತೆ ಸರ್ಕಾರದ ಆದೇಶಗಳನ್ನು ಉಲ್ಲಂಘಿಸಿ ಕೋವಿಡ್ ನಿರ್ವಹಣೆಯ ಬಹುಪಾಲು ಬಿಲ್‌ಗಳನ್ನು ಬಿಬಿಎಂಪಿಯ ಕಲ್ಯಾಣ ಇಲಾಖೆಯಿಂದ ಅನುಮೋದನೆ ಮಾಡಿಸಿ, ಹಣ ಪಾವತಿಸಲಾಗಿದೆ ಎಂದು ಪತ್ರದಲ್ಲಿ ಮಾಜಿ ಶಾಸಕ ಆರ್. ಮಂಜುನಾಥ್ ಆರೋಪಿಸಿದ್ದಾರೆ.

ಇನ್ನು ಇದೊಂದು ದೊಡ್ಡ ಮೊತ್ತದ ಬಿಲ್ ಆಗಿದ್ದು, ಇದರಲ್ಲಿ ಲೋಪದೋಷಗಳು ಕಂಡು ಬಂದಿವೆ. ಈ ಬಗ್ಗೆ ತನಿಖೆ ನಡೆಸುವಂತೆ ಕೋರಿ ನಾನು ಶಾಸಕನಾಗಿದ್ದ ಅವಧಿಯಲ್ಲೇ ಬಿಬಿಎಂಪಿಯ ವಿಶೇಷ ಆಯುಕ್ತರು ಹಾಗೂ ಹಣಕಾಸು ವಿಭಾಗದ ಮುಖ್ಯಸ್ಥರಿಗೆ ಪತ್ರ ಬರೆದಿದ್ದೆ. ಆದರೂ ತನಿಖೆ ನಡೆಸಿಲ್ಲ. ಮಹಾಲೇಖಪಾಲರು ಅಥವಾ ರಾಜ್ಯದ ಅಕೌಂಟೆಂಟ್‌ ಜನರಲ್‌ ಅವರಿಂದಲೂ ಲೆಕ್ಕಪರಿಶೋಧನೆ ನಡೆಸಿಲ್ಲ ಎಂದು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಆರ್. ಮಂಜುನಾಥ್​ ಅವರು ಪತ್ರದಲ್ಲಿ ವಿವರಿಸಿದ್ದಾರೆ.

ಈ ವಲಯ ವ್ಯಾಪ್ತಿಯಲ್ಲಿ ಕೋವಿಡ್ ನಿರ್ವಹಣೆ ಹಾಗೂ ಬಿಐಇಸಿ ಕೋವಿಡ್ ಆರೈಕೆ ಕೇಂದ್ರದ ನಿರ್ವಹಣಾ ವೆಚ್ಚವನ್ನು ದಾಸರಹಳ್ಳಿಯ ಬಿಬಿಎಂಪಿ ವಲಯದಿಂದಲೇ ಪಾವತಿಸಿರುವುದಾಗಿ ಮಾಹಿತಿ ಇದೆ. ಹಾಗಾಗಿ ಈ ಕುರಿತು ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಿ, ಆಗಿರುವ ನಷ್ಟವನ್ನು ಅವರಿಂದಲೇ ವಸೂಲು ಮಾಡಬೇಕು’ ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಗಣೇಶ ವಿಸರ್ಜನೆ ಜೋಶ್‌ನಲ್ಲಿ ಮಹಾ ಯಡವಟ್ಟು.. ಗಣಪನ ಮೂರ್ತಿ ಜೊತೆ 65 ಗ್ರಾಂ ಚಿನ್ನದ ಸರವೂ ನೀರಿಗೆ..!

Leave a Comment

DG Ad

RELATED LATEST NEWS

Top Headlines

ಕಮಲ್ ಹಾಸನ್ ಅಭಿನಯದ ‘ಥಗ್ ಲೈಫ್’ ಚಿತ್ರದ ರಿಲೀಸ್​ ಡೇಟ್​​ ಅನೌನ್ಸ್..!

ಕಮಲ್ ಹಾಸನ್ ಅಭಿನಯದ ಮತ್ತು ಮಣಿರತ್ನಂ ನಿರ್ದೇಶನದ ‘ಥಗ್ ಲೈಫ್’ ಚಿತ್ರ ವಿಶ್ವದಾದ್ಯಂತ 2025ರ ಜೂನ್ 5ರಂದು ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ. ಇಂದು ಕಮಲ್ ಹಾಸನ್ ಅವರ ಹುಟ್ಟುಹಬ್ಬದ

Live Cricket

Add Your Heading Text Here