ಹಾಸನ : ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್ನ ಟೈರ್ ಸ್ಫೋಟಗೊಂಡು ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ಜಿಲ್ಲೆಯ ಶಾಂತಿಗ್ರಾಮ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಪ್ರಯಾಣಿಕರೊಬ್ಬರ ಸಮಯಪ್ರಜ್ಞೆಯಿಂದ ಬಸ್ನಲ್ಲಿದ್ದ 36 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಲಗೇಜ್ ಹಾಗೂ ಮೊಬೈಲ್ ವಸ್ತುಗಳು ಬೆಂಕಿಗಾಹುತಿಯಾಗಿವೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಧಾವಿಸಿದ್ದು, ಕಾರ್ಯಾಚರಣೆ ನಡೆಸಿದ್ದಾರೆ. ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಹೆದ್ದಾರಿಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಇದನ್ನೂ ಓದಿ : ತೈಲ ಬೆಲೆ ಹೆಚ್ಚಳ ಭಾರತದಲ್ಲೇ ಕನಿಷ್ಠ – ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ!
Author: Btv Kannada
Post Views: 292







