Download Our App

Follow us

Home » ರಾಜಕೀಯ » ‘ಮುಡಾ’ ಅಸ್ತ್ರಕ್ಕೆ ಪ್ರತ್ಯಸ್ತ್ರ : BJP ಅವಧಿಯ ಅಕ್ರಮಗಳ ತನಿಖೆ ಚುರುಕು, ಪರಮೇಶ್ವರ್ ನೇತೃತ್ವದಲ್ಲಿ ಸಮಿತಿ ರಚನೆ..!

‘ಮುಡಾ’ ಅಸ್ತ್ರಕ್ಕೆ ಪ್ರತ್ಯಸ್ತ್ರ : BJP ಅವಧಿಯ ಅಕ್ರಮಗಳ ತನಿಖೆ ಚುರುಕು, ಪರಮೇಶ್ವರ್ ನೇತೃತ್ವದಲ್ಲಿ ಸಮಿತಿ ರಚನೆ..!

ಬೆಂಗಳೂರು : ಬಿಜೆಪಿ ಸರ್ಕಾರದ ಅವಧಿಯಲ್ಲಿನ ಹಗರಣಗಳ ಮತ್ತು ಇತರ ಹಗರಣಗಳ ತನಿಖೆಯ ಪ್ರಗತಿ ಪರಿಶೀಲನೆಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಈ ವಿಚಾರವಾಗಿ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಆದೇಶ ಹೊರಡಿಸಿದ್ದಾರೆ.

ಸಿದ್ದರಾಮಯ್ಯ ಆದೇಶದಲ್ಲೇನಿದೆ? ಸರ್ಕಾರದ ಮತ್ತು ತನಿಖಾ ಸಂಸ್ಥೆಗಳ ಹಂತದಲ್ಲಿ ಚಾಲ್ತಿಯಲ್ಲಿರುವ ವಿವಿಧ ಹಗರಣಗಳ ತನಿಖೆಗಳ ಪ್ರಗತಿ, ಸಮನ್ವಯ ಮುಂತಾದ ಕಾರ್ಯಗಳಿಗೆ ಸಂಬಂಧಿಸಿದಂತೆ ಕ್ರಮ ವಹಿಸಲು ಈ ಕೆಳಕಂಡಂತೆ ಮಾನ್ಯ ಸಚಿವರುಗಳನ್ನೊಳಗೊಂಡ ಸಮಿತಿಯನ್ನು ರಚಿಸಲಾಗಿದೆ ಎಂದು ಉಲ್ಲೇಖಿಸಿರುವ ಸಿದ್ದರಾಮಯ್ಯ, ಸಮಿತಿಯ ಸದಸ್ಯರ ಹೆಸರುಗಳನ್ನು ಉಲ್ಲೇಖಿಸಿದ್ದಾರೆ.

ಸಚಿವರ ಸಮಿತಿಯ ಸದಸ್ಯರು :

  • ಎಚ್.ಕೆ. ಪಾಟೀಲ – ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು.
  • ಕೃಷ್ಣ ಬೈರೇಗೌಡ – ಕಂದಾಯ ಸಚಿವರು.
  • ಪ್ರಿಯಾಂಕ್ ಖರ್ಗೆ – ಗ್ರಾಮೀಣಾಭೀವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು.
  • ಸಂತೋಷ್ ಎಸ್ ಲಾಡ್ – ಕಾರ್ಮಿಕ ಸಚಿವರು

ಸಮಿತಿಯು ಮುಂದಿನ ಎರಡು ತಿಂಗಳಲ್ಲಿ ತನಗೆ ವಹಿಸಿರುವ ಜವಾಬ್ದಾರಿಯನ್ನು ಪೂರ್ಣಗೊಳಿಸುವಂತೆ ಕೋರಿದೆ ಎಂದು ಆದೇಶದಲ್ಲಿ ಸಿಎಂ ಉಲ್ಲೇಖಿಸಿದ್ದಾರೆ.

Leave a Comment

DG Ad

RELATED LATEST NEWS

Top Headlines

ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದಲ್ಲಿ ಡ್ರೆಸ್ ಕೋಡ್ ಜಾರಿ – ದೇವರ ದರ್ಶನಕ್ಕೆ ಸಾಂಪ್ರದಾಯಿಕ ಉಡುಗೆ ಕಡ್ಡಾಯ..!

ಚಿಕ್ಕಮಗಳೂರು : ಇತ್ತೀಚೆಗೆ ಶೃಂಗೇರಿಯ ಶ್ರೀ ಶಾರದಾಂಬೆ ಸನ್ನಿಧಾನದಲ್ಲಿ ಹಾಗೂ ಸುತ್ತಲಿನ ದೇವಸ್ಥಾನಗಳಲ್ಲಿ ಡ್ರೆಸ್ ಕೋಡ್ ಜಾರಿಯಾಗಿತ್ತು. ಇದೀಗ ರಾಜ್ಯದ ಪ್ರಸಿದ್ಧ ಯಾತ್ರಾ ಸ್ಥಳವಾದ ಹೊರನಾಡು ಶ್ರೀ

Live Cricket

Add Your Heading Text Here