ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಭಾರೀ ಅಗ್ನಿ ಅವಘಡ – ಅದೃಷ್ಟವಶಾತ್‌ 68 ಪ್ರಯಾಣಿಕರು ಸೇಫ್!

ಕೇರಳದ ತಿರುವನಂತಪುರಂನಿಂದ ದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನ ಎಸಿ ಕೋಚ್‌ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ.

ಪಶ್ಚಿಮ ಮಧ್ಯ ರೈಲ್ವೆಯ ಕೋಟಾ ವಿಭಾಗದ ವ್ಯಾಪ್ತಿಯಲ್ಲಿ ಬರುವ ಲುನಿ ರಿಚ್ಚಾ ಮತ್ತು ವಿಕ್ರಮಗಢ ಅಲೋಟ್ ನಿಲ್ದಾಣಗಳ ನಡುವೆ ಮುಂಜಾನೆ ಸುಮಾರು 5.30 ಕ್ಕೆ ರೈಲು ಸಂಖ್ಯೆ 12431 ರ ಬಿ-1 ಕೋಚ್‌ನಲ್ಲಿ ಈ ಅವಘಡ ಸಂಭವಿಸಿದೆ. ಈ ಕೋಚ್‌ನಲ್ಲಿ 68 ಮಂದಿ ಪ್ರಯಾಣಿಸುತ್ತಿದ್ದರು.

ಅದೃಷ್ಟವಶಾತ್ ರೈಲಿನಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿದ್ದಾರೆ. ಬೆಂಕಿ ಕಾಣಿಸಿಕೊಂಡಾಗಲೇ ರೈಲ್ವೆ ಸಿಬ್ಬಂದಿ ತಕ್ಷಣ ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಬೆಂಕಿ ತಗುಲಿದ ಕೋಚ್ ಅನ್ನು ರೈಲಿನಿಂದ ಬೇರ್ಪಡಿಸಿದ ಪರಿಣಾಮ ಹೆಚ್ಚಿನ ಅನಾಹುತ ತಪ್ಪಿದೆ.

ಇದನ್ನೂ ಓದಿ : ಆಟೋ, ಟ್ಯಾಕ್ಸಿ​ ಚಾಲಕರಿಗೆ ಮತ್ತೆ ಶಾಕ್​​ – CNG ದರ ಕೆಜಿಗೆ 1 ರೂ. ಹೆಚ್ಚಳ ಮಾಡಿದ ಕೇಂದ್ರ ಸರ್ಕಾರ!

Btv Kannada
Author: Btv Kannada

Leave a Comment

Read More