ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ನಟಿ ರಚಿತಾ ರಾಮ್!

ಮಂಗಳೂರು : ಸ್ಯಾಂಡಲ್​ವುಡ್​ನ ಡಿಂಪಲ್ ಕ್ವೀನ್,​ ನಟಿ ರಚಿತಾ ರಾಮ್ ಕೊರಗಜ್ಜ ದೈವಕ್ಕೆ ಹರಕೆ ಕೋಲ ಸಲ್ಲಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೆಂಜನಪದವಿನ ಕೊರಗಜ್ಜ ಸನ್ನಿಧಿಯಲ್ಲಿ ನಟಿ ರಚಿತಾ ರಾಮ್ ತನ್ನ ಹರಕೆ ಕೋಲ ಸೇವೆ ಸಲ್ಲಿಸಿದ್ದಾರೆ. ತಾನು ಅಂದುಕೊಂಡ ಕೆಲಸಗಳು ನೆರವೇರಿದರೆ ಕೊರಗಜ್ಜ ದೈವಕ್ಕೆ ಕೋಲ ಸೇವೆ ಸಲ್ಲಿಸುವ ಹರಕೆ ಹೊತ್ತಿದ್ದ ರಚಿತಾ ರಾಮ್, ಇದೀಗ ಆ ಹರಕೆಯನ್ನು ಪೂರ್ಣಗೊಳಿಸಿದ್ದಾರೆ.

ಕನ್ನಡ ಚಿತ್ರರಂಗದ ಬಹುತೇಕ ಎಲ್ಲಾ ಸೂಪರ್‌ಸ್ಟಾರ್ ನಟರ ಜೊತೆ ತೆರೆ ಹಂಚಿಕೊಂಡಿರುವ ರಚಿತಾ ರಾಮ್.ಸದ್ಯ ರಚಿತಾ ರಾಮ್, ಧ್ರುವ ಸರ್ಜಾ ಜೊತೆ ಕ್ರಿಮಿನಲ್, ಸತೀಶ್ ನೀನಾಸಂ ಜೊತೆ ʻಅಯೋಗ್ಯ 2ʼ ಸಿನಿಮಾದಲ್ಲಿ ನಟಿಸುತ್ತಿದ್ದು, ತಮಿಳಿನಲ್ಲಿ ದೊಡ್ಡ ನಿರ್ಮಾಣ ಸಂಸ್ಥೆ ಜೊತೆ ಮಾತುಕತೆ ನಡೆದಿದ್ದು, ತೆಲುಗಿನಲ್ಲಿ ಎರಡು ಸಿನಿಮಾಗಳು ಈ ತಿಂಗಳಲ್ಲಿ ಅನೌನ್ಸ್ ಆಗಲಿದೆ.

ಇದನ್ನೂ ಓದಿ : ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಭಾರೀ ಅಗ್ನಿ ಅವಘಡ – ಅದೃಷ್ಟವಶಾತ್‌ 68 ಪ್ರಯಾಣಿಕರು ಸೇಫ್!

Btv Kannada
Author: Btv Kannada

Leave a Comment

Read More