ಪೊಲೀಸರ ಕಣ್ತಪ್ಪಿಸಿ ನಿರಾಶ್ರಿತರ ಕೇಂದ್ರದಲ್ಲಿದ್ದ ನಾಲ್ವರು ವಿದೇಶಿ ಅಕ್ರಮ ವಲಸಿಗರು ಎಸ್ಕೇಪ್!

ಬೆಂಗಳೂರಿನ ಕೊತ್ತನೂರಿನಲ್ಲಿರುವ ನಿರಾಶ್ರಿತರ ಕೇಂದ್ರವೊಂದರಿಂದ ನಾಲ್ವರು ವಿದೇಶಿ ಅಕ್ರಮ ವಲಸಿಗ ಮಹಿಳೆಯರು ಎಸ್ಕೇಪ್ ಆಗಿದ್ದಾರೆ.

ಮೇ 11ರಂದು ಮುಂಜಾನೆ 3 ಗಂಟೆ ಸುಮಾರಿಗೆ ಆಶ್ರಮದ ಎರಡನೇ ಅಂತಸ್ತಿನ ಕಿಟಕಿಯ ಗ್ರಿಲ್ ಮುರಿದು ತಪ್ಪಿಸಿಕೊಂಡಿದ್ದಾರೆ. ಈ ಸಂಬಂಧ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪರಾರಿಯಾದ ಮಹಿಳೆಯರು ಉಗಾಂಡ ಮತ್ತು ನೈಜೀರಿಯಾ ಮೂಲದವರಾಗಿದ್ದು, ಅವರ ವೀಸಾ ಅವಧಿ ಮುಗಿದಿದ್ದರೂ ದೇಶಕ್ಕೆ ಮರಳದೆ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು. ಉಗಾಂಡದ ತೋಪಿಷ್ಟ, ನಗವ, ಸಫಿನಾ ಮತ್ತು ಪಿತೀನ ಎಂಬ ಮಹಿಳೆಯರು ತಪ್ಪಿಸಿಕೊಂಡವರಲ್ಲಿ ಸೇರಿದ್ದಾರೆ. ಈ ಅಕ್ರಮ ವಲಸಿಗರನ್ನು ವಿದೇಶಿ ಪ್ರಾದೇಶಿಕ ನೋಂದಣಿ ಕಚೇರಿ (FRRO) ಅಧಿಕಾರಿಗಳು ವಶಕ್ಕೆ ಪಡೆದು, ತಮ್ಮ ಜೈಲಿನಲ್ಲಿ ಸ್ಥಳಾವಕಾಶದ ಕೊರತೆಯಿಂದಾಗಿ ಹೋಮ್ ಆಫ್ ಹೋಪ್ ಆಶ್ರಮದಲ್ಲಿ ಇರಿಸಿದ್ದರು.

ಈ ಮಹಿಳೆಯರು ಈಗಾಗಲೇ ಗಾಂಜಾ, ಡ್ರಗ್ಸ್ ಸೇರಿದಂತೆ ಹಲವು ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು. ಆಶ್ರಮದಲ್ಲಿ ಇರಿಸಿದ್ದಾಗಲೂ ಅವರ ಬಳಿ ಗಾಂಜಾ ಮತ್ತು ಡ್ರಗ್ಸ್ ಪತ್ತೆಯಾಗಿತ್ತು.

ಇದನ್ನೂ ಓದಿ : ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ನಟಿ ರಚಿತಾ ರಾಮ್!

Btv Kannada
Author: Btv Kannada

Leave a Comment

Read More