ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ ಸತೀಶನ್‌ ಪ್ರಮಾಣವಚನ ಸ್ವೀಕಾರ!

ತಿರುವನಂತಪುರಂ : ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ ಸತೀಶನ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಜೊತೆಗೆ 20 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದು, ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರು ಪ್ರಮಾಣ ವಚನ ಬೋಧಿಸಿದ್ದಾರೆ.

ಇತ್ತೀಚೆಗೆ ನಡೆದ ಕೇರಳಂ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಅಧಿಕಾರಕ್ಕೇರಿರುವ ಕಾಂಗ್ರೆಸ್​​ ನೇತೃತ್ವದ ಯುಡಿಎಫ್, ನೂತನ ಸಿಎಂ ಆಗಿ ವಿಡಿ ಸತೀಶನ್ ಅವರನ್ನು ಆಯ್ಕೆ ಮಾಡಿದೆ.

ಕಾಂಗ್ರೆಸ್​ನಿಂದ 11 ಮಂದಿ, ಮುಸ್ಲಿಂ ಲೀಗ್​ನ ಐವರು ಹಾಗೂ ಮಾನ್ಸ್ ಜೋಸೆಫ್ (ಕೇರಳ ಕಾಂಗ್ರೆಸ್-ಜೋಸೆಫ್), ಶಿಬು ಬೇಬಿ ಜಾನ್ (ಕ್ರಾಂತಿಕಾರಿ ಸಮಾಜವಾದಿ ಪಕ್ಷ), ಅನೂಪ್ ಜಾಕೋಬ್ (ಕೇರಳ ಕಾಂಗ್ರೆಸ್-ಜಾಕೋಬ್), ಮತ್ತು ಸಿಪಿ ಜಾನ್ (ಕಮ್ಯುನಿಸ್ಟ್ ಮಾರ್ಕ್ಸ್ವಾದಿ ಪಕ್ಷ) ಅವರಿಗೂ ಅವಕಾಶ ಮಾಡಿಕೊಡಲಾಗಿದೆ.

ಇದನ್ನೂ ಓದಿ : ಪ್ಯಾಸೆಂಜರ್ ರೈಲಿನಲ್ಲಿ ಭಾರಿ ಅಗ್ನಿ ಅವಘಡ – ಶಾರ್ಟ್ ಸರ್ಕ್ಯೂಟ್ ಶಂಕೆ!

Btv Kannada
Author: Btv Kannada

Leave a Comment

Read More