ಮಡಿಕೇರಿ : ದುಬಾರೆ ಆನೆ ಶಿಬಿರದಲ್ಲಿ ಎರಡು ಸಾಕಾನೆಗಳ ಕಾಳಗಕ್ಕೆ ಪ್ರವಾಸಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ.

ಚೆನ್ನೈ ಮೂಲದ ಜಿನ್ಶು (33) ಎಂಬ ಮಹಿಳೆ ಮದಗಜಗಳ ಕಾದಾಟಕ್ಕೆ ಸಿಲುಕಿ ಬಲಿಯಾಗಿರುವ ದುರ್ದೈವಿ. ಆನೆಗಳಿಗೆ ಸ್ನಾನ ಮಾಡಿಸುತ್ತಿದ್ದಾಗ ಆಹಾರ ಕೊಡುವುದಕ್ಕಾಗಿ ಜಿನ್ಶು ಹೋಗಿದ್ದಾರೆ. ಈ ವೇಳೆ 2 ಆನೆಗಳು ಏಕಾಏಕಿ ಕಾದಾಟ ಆರಂಭಿಸಿವೆ.

ನೋಡು ನೋಡುತ್ತಿದ್ದಂತೆ ಸಾಕಾನೆಗಳ ಕಾದಾಟ ವಿಕೋಪಕ್ಕೆ ತಿರುಗಿದೆ. ಈ ವೇಳೆ ಒಂದು ಆನೆ ಮಹಿಳೆಯ ಮೇಲೆ ಬಿದ್ದಿದೆ. ಆನೆ ಬಿದ್ದ ಪರಿಣಾಮ, ಜಿನ್ಮು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರ ಪತಿ ಜೋಯಲ್‌ಗೆ ಗಂಭೀರ ಗಾಯಗಳಾಗಿವೆ.
ಇದನ್ನೂ ಓದಿ : ಜೂ.15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ – ಮೊದಲ ಸಂಪುಟ ಸಭೆಯಲ್ಲೇ ಸಿಎಂ ವಿ.ಡಿ ಸತೀಶನ್ ಘೋಷಣೆ!
Author: Btv Kannada
Post Views: 342









