Download Our App

Follow us

Home » ಸಿನಿಮಾ » ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಹೊಂದಿರುವ ‘ಮಾಂತ್ರಿಕ’ ಚಿತ್ರದ ಟೀಸರ್ ರಿಲೀಸ್..!

ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಹೊಂದಿರುವ ‘ಮಾಂತ್ರಿಕ’ ಚಿತ್ರದ ಟೀಸರ್ ರಿಲೀಸ್..!

ವ್ಯಾನವರ್ಣ ಜಮ್ಮುಲ ಅವರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ ಮಾಂತ್ರಿಕ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಜಗತ್ತಿನಲ್ಲಿ ದೆವ್ವ, ಭೂತಗಳು ಇದೆಯೋ ಇಲ್ಲವೊ ಗೊತ್ತಿಲ್ಲ. ಆದರೆ ಅವುಗಳ ಸತ್ಯಾಸತ್ಯತೆಯ ಹುಡುಕಾಟ ಮಾತ್ರ ನಡೆದೇ ಇದೆ. ಅಂಥದೇ ಒಂದು ಹುಡುಕಾಟದ ಪ್ರಯತ್ನದಲ್ಲಿ ಹೊರಬಂದ ಚಿತ್ರವೇ ಮಾಂತ್ರಿಕ. ವ್ಯಾನವರ್ಣ ಜಮ್ಮುಲ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲೂ ಸಹ ಕಾಣಿಸಿಕೊಂಡಿದ್ದಾರೆ.

ಘೋಸ್ಟ್ ಹಂಟರ್(ಆತ್ಮಗಳನ್ನು ಪತ್ತೆಹಚ್ಚುವವ) ಸುತ್ತ ನಡೆಯುವ ಇಂಟಲೆಕ್ಚುಯಲ್, ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಈ ಚಿತ್ರದಲ್ಲಿದೆ. ದೆವ್ವ ಅನ್ನೋದು ಇದೆಯೋ ಇಲ್ಲವೋ ಅಥವಾ ಅದೆಲ್ಲಾ ನಮ್ಮ ಭ್ರಮೆಯೋ ಎನ್ನುವುದರ ಸುತ್ತ ಸಾಗುವ ಕಥೆ ಈ ಚಿತ್ರದಲ್ಲಿದ್ದು, ರಾಧಿಕಾ ಮಾಲಿ ಪಾಟೀಲ ಹಾಗೂ ಮೈಥಿಲಿ ನಾಯಕ್ ನಾಯಕಿಯರಾಗಿ ನಟಿಸಿದ್ದಾರೆ.

ವ್ಯಾನವರ್ಣ ಜಮ್ಮುಲ ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಮಾನವ ದಿನದ 24 ಘಂಟೆಯೂ ಮಾನವ ಭಯದಲ್ಲೇ ಬದುಕುತ್ತಿದ್ದಾನೆ. ಮೊದಲು ಅ ಭಯವನ್ನು ನಮ್ಮ‌ ಮನಸಿನಿಂದ ತೆಗೆದುಹಾಕಿ, ಕಮ್ ಟು ರಿಯಾಲಿಟಿ ಎಂದು ಈ ಚಿತ್ರದಲ್ಲಿ ಹೇಳಿದ್ದೇವೆ. ದೆವ್ವ ಇದೆಯೋ, ಇಲ್ವೋ, ಇದ್ರೆ ಅದು ಹೇಗಿರುತ್ತೆ, ಅಥವಾ ಇದು ಸೈಕಲಾಜಿಕಲ್ ಫೀಲಿಂಗೋ ? ಎಂಬುದನ್ನೂ ಸಹ ಚಿತ್ರದಲ್ಲಿ ತೋರಿಸಿದ್ದೇವೆ. ಸಿಟಿಆರ್(ಕಮ್ ಟು ರಿಯಾಲಿಟಿ) ಅರ್ಗನೈಜೇಶನ್ ನಡೆಸೋ ದೆವ್ವಗಳನ್ನು ಹಂಟರ್ ಕೃಷ್ಣನ ಪಾತ್ರದಲ್ಲಿ ನಾನು ಕಾಣಿಸಿಕೊಂಡಿದ್ದೇನೆ. ದೆವ್ವಗಳ ಬಗ್ಗೆ ಕೇಳಿ ಬಂದವರಿಗೆ ಸಲಹೆ ನೀಡುವುದು ಆತನ ಕೆಲಸ. ಭಯ ಅನ್ನೋದು ಎಲ್ಲರಿಗೂ ಕನೆಕ್ಟ್ ಆಗುತ್ತೆ.

ಜನರಿಗೆ ಆ ಬಗ್ಗೆ ಎಜುಕೇಟ್ ಮಾಡಬೇಕು, ಜೊತೆಗೆ ಎಂಟರ್ ಟೈನ್ ಮೆಂಟ್ ಕೊಡಬೇಕೆಂದು ಮಾಡಿದ ಚಿತ್ರವಿದು. ಮೂಢನಂಬಿಕೆಗಳಿಂದ ಮೂಢರಾಗಬೇಡಿ, ಅದರ ಹಿಂದಿನ ಸತ್ಯಾಂಶ ಬೇರೇನೇ ಇರುತ್ತೆ, ಅದನ್ನು ನೋಡಿದ ಮೇಲೆ ನಿರ್ಧರಿಸಿ ಅಂತ ಇದರಲ್ಲಿ ಹೇಳಿದ್ದೇವೆ. ಬೆಂಗಳೂರು, ಮಂಗಳೂರು ಅಲ್ಲದೆ ಬೆಂಗಳೂರಿನಲ್ಲಿ ಖಾಲಿ ಇದ್ದ ಮಾಲ್‌ವೊಂದರಲ್ಲಿ ಪ್ರಮುಖ ಭಾಗದ ಚಿತ್ರೀಕರಣ ಮಾಡಿದ್ದೇವೆ. ಮಾಲ್‌ನಲ್ಲಿ ಶೂಟ್ ಮಾಡುವಾಗ ಚಿತ್ರತಂಡಕ್ಕೆ ಸಾಕಷ್ಟು ವಿಚಿತ್ರ ಅನುಭವಗಳಾಗಿವೆ ಎಂದು ಹೇಳಿದರು.

ನಿರ್ಮಾಪಕಿ, ನಿರ್ದೇಶನದಲ್ಲೂ ಸಾಥ್ ನೀಡಿದ ವ್ಯಾನವರ್ಣ ಅವರ ಪತ್ನಿ ಆಯನ, ನಾನು ಎಂಎನ್ ಸಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಈಗಾಗಲೇ ಸಿನಿಮಾ ನೋಡಿದ್ದೇನೆ. ಜಗತ್ತಿನಲ್ಲಿ ಮಾಟ, ಮಂತ್ರ ಅನ್ನೋದು ಇದೆಯಾ ಎಂಬುದರ ರಿಯಾಲಿಟಿ ಬಗ್ಗೆ ಹೇಳುವ ಚಿತ್ರವಿದು. ಅದೇ ಕಾರಣಕ್ಕೆ ಈ ಸಿನಿಮಾ ನಿರ್ಮಾಣದಲ್ಲಿ ನಾನೂ ಜೊತೆಯಾದೆ. ದಸರಾ ವೇಳೆಗೆ ರಿಲೀಸ್ ಮಾಡುವ ಪ್ಲಾನ್ ಇದೆ ಎಂದರು.

ನಿರ್ಮಾಣದಲ್ಲಿ ಕೈ ಜೋಡಿಸಿದ ದುಶ್ಯಂತ್ ಗೋಲ್ಡ್, ಅಲ್ಲದೆ ಬೆಳ್ಳಿದೀಪ ಗೋವಿಂದ್, ದೇವೇಂದ್ರ, ಮುಂಜಾನೆ ಮಂಜು, ಜಗದೀಶ್ ಎಲ್ಲರೂ ಚಿತ್ರದ ಬಗ್ಗೆ ಮಾತನಾಡಿದರು. ಕೃಷ್ಣ ಸಂಕುಲ ಬ್ರಾಂಡಿಂಗ್ ಪಿಕ್ಚರ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಸೆನ್ಸಾರ್​​ನಿಂದ ಯು/ಎ ಪ್ರಮಾಣಪತ್ರ ಸಿಕ್ಕಿದ್ದು ಮುಂದಿನ ತಿಂಗಳು ರಿಲೀಸ್ ಮಾಡುವ ಯೋಚನೆ ಚಿತ್ರತಂಡಕ್ಕಿದೆ. ಇನ್ನು ಈ ಚಿತ್ರಕ್ಕೆ ನಿರ್ದೇಶಕರೇ ಸಂಕಲನ ಮಾಡಿದ್ದು, ಸ್ಟಾಲಿನ್ ಅವರ ಸಂಗೀತ ಸಂಯೋಜನೆ, ಅನಿಲ್ ಆಂಟೋನಿ ಹಾಗೂ ರಮೇಶ್ ಮರ‍್ರಿಪಲ್ಲಿ ಅವರ ಛಾಯಾಗ್ರಹಣ, ಲಯನ್ ಜಿ.ಗಂಗರಾಜು ಅವರ ಸಾಹಸ ಸಂಯೋಜನೆ ಈ ಚಿತ್ರಕ್ಕಿದೆ.

ಇದನ್ನೂ ಓದಿ : ಕನ್ನಡದಲ್ಲೇ ಔಷಧಿ ಚೀಟಿ ಬರೆಯುತ್ತಾರೆ ಈ ಡಾಕ್ಟರ್ – ಹೊಸದುರ್ಗದ ಡಾ.ಸಂಜಯ್ ಕನ್ನಡ ಪ್ರೇಮಕ್ಕೆ ಕನ್ನಡಿಗರ ಮೆಚ್ಚುಗೆ..!

Leave a Comment

DG Ad

RELATED LATEST NEWS

Top Headlines

ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದಲ್ಲಿ ಡ್ರೆಸ್ ಕೋಡ್ ಜಾರಿ – ದೇವರ ದರ್ಶನಕ್ಕೆ ಸಾಂಪ್ರದಾಯಿಕ ಉಡುಗೆ ಕಡ್ಡಾಯ..!

ಚಿಕ್ಕಮಗಳೂರು : ಇತ್ತೀಚೆಗೆ ಶೃಂಗೇರಿಯ ಶ್ರೀ ಶಾರದಾಂಬೆ ಸನ್ನಿಧಾನದಲ್ಲಿ ಹಾಗೂ ಸುತ್ತಲಿನ ದೇವಸ್ಥಾನಗಳಲ್ಲಿ ಡ್ರೆಸ್ ಕೋಡ್ ಜಾರಿಯಾಗಿತ್ತು. ಇದೀಗ ರಾಜ್ಯದ ಪ್ರಸಿದ್ಧ ಯಾತ್ರಾ ಸ್ಥಳವಾದ ಹೊರನಾಡು ಶ್ರೀ

Live Cricket

Add Your Heading Text Here