ಬೆಂಗಳೂರು : ಶ್ರೀರಂಗಪಟ್ಟಣ ಕ್ಷೇತ್ರದ ಕಾಂಗ್ರೆಸ್ ಶಾಸಕ ರಮೇಶ ಬಂಡಿಸಿದ್ದೇಗೌಡ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿಬಂದಿದೆ. ಈ ಸಂಬಂಧ ರಮೇಶ ಬಂಡಿಸಿದ್ದೇಗೌಡ ಮೇಲೆ ವಕೀಲರು, ಸಾಮಾಜಿಕ ಕಾರ್ಯಕರ್ತರು ಚುನಾವಣಾ ಆಯೊಗಕ್ಕೆ ದೂರು ನೀಡಿದ್ದಾರೆ.

ಚುನಾವಣಾ ಸಮಯದಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ ಒಟ್ಟು ಆಸ್ತಿ ವಿವರಗಳನ್ನು ಒಳಗೊಂಡ ಅಫಿಡವಿಟ್ ಸಲ್ಲಿಸುವುದು ಕಡ್ಡಾಯ. ಆದರೆ, ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ತಮ್ಮ ನೈಜ ಆಸ್ತಿಯ ವಿವರಗಳನ್ನು ಮರೆಮಾಚಿದ್ದಾರೆ ಎಂಬ ಆರೋಪವಿದೆ.

ಶಾಸಕರು ಮೈಸೂರು ಮತ್ತು ಅದರ ಸುತ್ತಮುತ್ತಲಿನ ಪ್ರಮುಖ ಪ್ರದೇಶಗಳಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಬೇನಾಮಿ ಆಸ್ತಿಗಳನ್ನು ಹೊಂದಿದ್ದಾರೆ ಎಂಬ ಆಪಾದನೆಯಿದೆ. ಚುನಾವಣಾ ನಿಯಮಾವಳಿಗಳನ್ನು ಉಲ್ಲಂಘಿಸಿ, ತಪ್ಪು ಮಾಹಿತಿ ನೀಡಿರುವ ಹಾಗೂ ಅಕ್ರಮ ಆಸ್ತಿ ಗಳಿಸಿರುವ ರಮೇಶ್ ಬಂಡಿಸಿದ್ದೇಗೌಡ ಅವರನ್ನು ತಕ್ಷಣವೇ ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತರು ಮತ್ತು ವಕೀಲರು ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.

ಇದೀಗ ಶ್ರೀರಂಗಪಟ್ಟಣ ಕ್ಷೇತ್ರದ ಕಾಂಗ್ರೆಸ್ ಶಾಸಕ ರಮೇಶ ಬಂಡಿಸಿದ್ದೇಗೌಡಗೆ ಬೇನಾಮಿ ಆಸ್ತಿಯಿಂದಾಗಿ ಸಂಕಷ್ಟ ಎದುರಾಗಿದೆ.







ಇದನ್ನೂ ಓದಿ : ದುಬಾರೆಯಲ್ಲಿ ಆನೆಗಳ ಕಾಳಗಕ್ಕೆ ಪ್ರವಾಸಿ ಮಹಿಳೆ ಬಲಿ!









