Download Our App

Follow us

Home » ರಾಷ್ಟ್ರೀಯ » ಜ.22 ರಾಮನ ಪ್ರಾಣ ಪ್ರತಿಷ್ಠಾಪನೆ ದಿನ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ..!

ಜ.22 ರಾಮನ ಪ್ರಾಣ ಪ್ರತಿಷ್ಠಾಪನೆ ದಿನ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ..!

ನವದೆಹಲಿ : ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರುವ ರಾಮನ ಭವ್ಯ ಮಂದಿರದ ಉದ್ಘಾಟನೆಗೆ ಇಡೀ ದೇಶವೇ ಕಾತರದಿಂದ ಕಾಯುತ್ತಿದೆ. ಶುಭ ಮುಹೂರ್ತಕ್ಕೆ ಇನ್ನು ಕೇವಲ 4 ದಿನಗಳು ಮಾತ್ರ ಬಾಕಿ ಉಳಿದಿದ್ದು, ಜನವರಿ 22 ರಂದು ರಾಮ ಮಂದಿರ ಉದ್ಘಾಟನೆಯಾಗಲಿದೆ. ಪ್ರಾಣಪ್ರತಿಷ್ಠೆ ನಂತರ ರಾಮಲಲ್ಲಾ ಮೂರ್ತಿಯನ್ನು ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲಾಗುತ್ತದೆ.

ಈ ಹಿನ್ನೆಲೆ, ರಾಮಮಂದಿರ ಉದ್ಘಾಟನೆಯ ದಿನವಾದ ಜನವರಿ 22 ರಂದು ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನದ ರಜೆ ನೀಡಿ ಸರ್ಕಾರ ಗುರುವಾರ ಆದೇಶಿಸಿದೆ. ಅಂದು ಮಧ್ಯಾಹ್ನ 2.30 ರವರೆಗೆ ಕಚೇರಿಗಳಿಗೆ ಬಿಡುವು ನೀಡಲಾಗುತ್ತಿದೆ ಎಂದು ಆದೇಶದಲ್ಲಿ ತಿಳಿಸಿದೆ.

ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮವು ದೇಶದ ಜನರ ಭಾವನಾತ್ಮಕ ವಿಷಯವಾಗಿದೆ. ಹೀಗಾಗಿ ಅಂದಿನ ಕಾರ್ಯಕ್ರಮವನ್ನು ಕಣ್ತುಂಬಿಕೊಳ್ಳಲು ಸರ್ಕಾರಿ ನೌಕರರಿಗೂ ಅವಕಾಶ ನೀಡುವ ಸಲುವಾಗಿ ಎಲ್ಲ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ನೀಡಲಾಗುತ್ತಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಗುರುವಾರ ಹೇಳಿದ್ದಾರೆ.

ಇದನ್ನೂ ಓದಿ : ರಾಜ್ಯದಲ್ಲಿ ಮಧ್ಯರಾತ್ರಿ 11 ಗಂಟೆಯಿಂದ ಲಾರಿ ಮುಷ್ಕರ ಆರಂಭ..!

Leave a Comment

DG Ad

RELATED LATEST NEWS

Top Headlines

ವಿಕ್ಕಿ ಯಾವಾಗಲೂ ಹೇಗಿರ್ತಾರೆ ಗೊತ್ತಾ? – ದಾಂಪತ್ಯದ ಸೀಕ್ರೆಟ್ ರಿವೀಲ್ ಮಾಡಿದ ಕತ್ರಿನಾ ಕೈಫ್..!

ಮುಂಬೈ : ಬಾಲಿವುಡ್​ನ​ ಕ್ಯೂಟ್​ ಕಪಲ್​ಗಳಲ್ಲಿ ಕತ್ರಿನಾ ಕೈಫ್​​ ಮತ್ತು ವಿಕ್ಕಿ ಕೌಶಲ್​ ಕೂಡ ಒಬ್ಬರು. 2021ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಈ ಮುದ್ದಾದ ಜೋಡಿಯನ್ನು ಬಿಗ್

Live Cricket

Add Your Heading Text Here