ಬೆಂಗಳೂರು : ಪಂಚ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ಮತ್ತು ರಾಜ್ಯದಲ್ಲಿನ ಎರಡು ಕ್ಷೇತ್ರಗಳ ಉಪ ಚುನಾವಣೆಯ ಕಾರಣಕ್ಕೆ ತಣ್ಣಗಾಗಿದ್ದ ಸಂಪುಟ ಪುನಾರಚನೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಕೇರಳ ಚುನಾವಣೆ ಮುಗಿದು ಸರ್ಕಾರ ರಚನೆಯಾಗಿರುವ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಸಮ್ಮತಿ ನೀಡಿದೆ.

ಜೂನ್.5ರಂದು ಸಿದ್ದರಾಮಯ್ಯ ಸಂಪುಟ ಪುನಾರಚನೆ ನಡೆಯಲಿದ್ದು, 10 ನೂತನ ಸಚಿವರ ಹೆಸರು ಸಂಪುಟ ಸೇರ್ಪಡೆಗೆ ಫೈನಲ್ ಆಗಿದೆ. ಕೊಳ್ಳೇಗಾಲ ವಿಧಾನಸಭೆ ಕ್ಷೇತ್ರದ ಶಾಸಕ A.R ಕೃಷ್ಣಮೂರ್ತಿ, ಮೈಸೂರಿನ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರು ಸಚಿವ ಸಂಪುಟ ಸೇರಲಿದ್ದಾರೆ.
ಇನ್ನು ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕ, ರಾಜ್ಯದ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್, ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್, ಶಿರಾ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಬಿ. ಜಯಚಂದ್ರ ಹಾಗೂ ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ ಅವರ ಹೆಸರನ್ನು ಸಚಿವ ಸಂಪುಟಕ್ಕೆ ಸೇರಿಸಲು ಫೈನಲ್ ಮಾಡಲಾಗಿದೆ.

ಹಾಗೆಯೇ ಬಾಗಲಕೋಟೆ ಜಿಲ್ಲೆಯ ಹುನಗುಂದ ವಿಧಾನಸಭಾ ಕ್ಷೇತ್ರದ ಶಾಸಕ ವಿಜಯಾನಂದ ಕಾಶಪ್ಪನವರ್, ಆನೇಕಲ್ ವಿಧಾನಸಭಾ ಕ್ಷೇತ್ರದ ಶಾಸಕ ಬಿ. ಶಿವಣ್ಣ ಹಾಗೂ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ವಿಧಾನಸಭಾ ಕ್ಷೇತ್ರದ ಶಾಸಕ ಆರ್. ವಿ. ದೇಶಪಾಂಡೆ ಅವರು ಸಚಿವ ಸಂಪುಟ ಸೇರಲಿದ್ದಾರೆ.
ಸಚಿವ ಸಂಪುಟ ಸೇರಲಿರುವ ನೂತನ ಸಚಿವರ ಪಟ್ಟಿ :
ಕೊಳ್ಳೇಗಾಲ ವಿಧಾನಸಭೆ ಕ್ಷೇತ್ರದ ಶಾಸಕ A.R ಕೃಷ್ಣಮೂರ್ತಿ

ಮೈಸೂರಿನ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕ ತನ್ವೀರ್ ಸೇಠ್

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ

ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕ, ರಾಜ್ಯದ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್

ಶಿರಾ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಬಿ. ಜಯಚಂದ್ರ

ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ

ಬಾಗಲಕೋಟೆಯ ಹುನಗುಂದ ವಿಧಾನಸಭಾ ಕ್ಷೇತ್ರದ ಶಾಸಕ ವಿಜಯಾನಂದ ಕಾಶಪ್ಪನವರ್

ಆನೇಕಲ್ ವಿಧಾನಸಭಾ ಕ್ಷೇತ್ರದ ಶಾಸಕ ಬಿ. ಶಿವಣ್ಣ

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ವಿಧಾನಸಭಾ ಕ್ಷೇತ್ರದ ಶಾಸಕ ಆರ್. ವಿ. ದೇಶಪಾಂಡೆ

ಇದನ್ನೂ ಓದಿ : “ಇದು ಶಿಸ್ತಿನ ಕ್ರಮವಲ್ಲ, ವೈಯಕ್ತಿಕ ಸೇಡು” – ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ವಿರುದ್ಧ ದೀಪಿಕಾ ರೆಡ್ಡಿ ಕಿಡಿ!









