ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಮೀಟರ್ ಬಡ್ಡಿ ದಂಧೆಯ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಮೀಟರ್ ಬಡ್ಡಿ ಕಟ್ಟಲಾಗದೆ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಬಸವೇಶ್ವರ ನಗರದಲ್ಲಿ ನಡೆದಿದೆ.

ಬಸವರಾಜ್ ಮೀಟರ್ ಬಡ್ಡಿ ಕಟ್ಟಲಾಗದೆ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮಹೇಂದ್ರ ಎಂಬುವವರಿಂದ ಬಸವರಾಜ್ 50 ಸಾವಿರ ಹಣ ಸಾಲ ಪಡೆದಿದ್ದ. ಸಾಲಕ್ಕೆ ಹೆಚ್ಚಿನ ಬಡ್ಡಿ ಕಟ್ಟಲು ಮಹೇಂದ್ರ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಪ್ರತಿ ತಿಂಗಳು ಹತ್ತರಿಂದ ಇಪ್ಪತ್ತು ಸಾವಿರ ರೂಪಾಯಿಗಳಷ್ಟು ದುಬಾರಿ ಬಡ್ಡಿ ಕಟ್ಟುವಂತೆ ಬಸವರಾಜ್ಗೆ ಟಾರ್ಚರ್ ನೀಡ್ತಿದ್ದ ಎಂದು ಆರೋಪವಿದೆ.

ಈ ಹಿಂದೆ ಬಸವರಾಜ್ ಸಾಲಕ್ಕೆ ಬಡ್ಡಿ ಕಟ್ಟಿದ್ದ, ಆದರೆ ಹೆಚ್ಚಿನ ಬಡ್ಡಿ ಕಟ್ಟಲಾಗದೆ ನರಕ ಯಾತನೆ ಅನುಭವಿಸಿದ್ದ. ಹಾಗಾಗಿ ನನ್ನ ಸಾವಿಗೆ ಮಹೇಂದ್ರ ಕಾರಣ ಎಂದು ಡೆತ್ ನೋಟ್ನಲ್ಲಿ ಹೆಸರನ್ನು ಉಲ್ಲೇಖ ಮಾಡಿ ಬಸವರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸದ್ಯ ಈ ಸಂಬಂಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.




ಇದನ್ನೂ ಓದಿ : ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಸಮ್ಮತಿ – ಜೂ.5ರಂದು ಸಿದ್ದರಾಮಯ್ಯ ಸಂಪುಟ ಪುನಾರಚನೆ.. ಇಲ್ಲಿದೆ ನೂತನ ಸಚಿವರ ಪಟ್ಟಿ!









