ಬೆಂಗಳೂರು : ತಿರುಪತಿ ಲಡ್ಡು ವಿವಾದ ಇದೀಗ ದೇಶದಲ್ಲೇ ಭಾರೀ ಸಂಚಲನ ಮೂಡಿಸಿದೆ. ಲಡ್ಡು ತಯಾರಿಕೆಗೆ ಬಳಸುವ ತುಪ್ಪದಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಸಾಬೀತಾಗುತ್ತಿದ್ದಂತೆ ರಾಜ್ಯ ಆರೋಗ್ಯ ಇಲಾಖೆ ಫುಲ್ ಅಲರ್ಟ್ ಆಗಿದೆ.
ಇದೀಗ ತಿರುಪತಿ ಲಡ್ಡು ವಿವಾದ ಬೆನ್ನಲ್ಲೇ ಫುಲ್ ಅಲರ್ಟ್ ರಾಜ್ಯ ಆರೋಗ್ಯ ಇಲಾಖೆ, ರಾಜ್ಯದಲ್ಲಿ ಬಳಸುವ ತುಪ್ಪದ ಬಗ್ಗೆ ಪರಿಶೀಲನೆಗೆ ಸೂಚನೆ ನೀಡಿದೆ. ಇದೀಗ ಈ ವಿಚಾರವಾಗಿ ಬೆಂಗಳೂರಿಲ್ಲಿ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.
ಈ ಬಗ್ಗೆ ಬೆಂಗಳೂರಲ್ಲಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್ ಅವರು, ತುಪ್ಪದ ಸ್ಯಾಂಪಲ್ಗಳನ್ನು ಸಂಗ್ರಹಿಸಿ ಪರಿಶೀಲನೆಗೆ ಒಳಪಡಿಸುವಂತೆ ಸೂಚನೆ ನೀಡಲಾಗಿದೆ. ನಂದಿನಿ ಹೊರತುಪಡಿಸಿ ಉಳಿದ ತುಪ್ಪದ ಸ್ಯಾಂಪಲ್ಗಳ ಪರಿಶೀಲನೆಗೆ ನಿರ್ಧರಿಸಲಾಗಿದೆ ಎಂದಿದ್ದಾರೆ.
ಈಗಾಗಲೇ ಎಲ್ಲಾ ಸ್ಯಾಂಪಲ್ ಸಂಗ್ರಹಿಸಿ ಪರಿಶೀಲಿಸಲು ಹೇಳಿದ್ದೇನೆ. ಪ್ರಸಾದದ ಪರಿಶೀಲನೆ ಮಾಡ್ತಿಲ್ಲ.. ತುಪ್ಪ ಮಾತ್ರ ಪರಿಶೀಲನೆ ಮಾಡಲು ಸೂಚನೆ ನೀಡಲಾಗಿದೆ. ನಾಳೆ ಪ್ರಸಾದವನ್ನು ಸ್ವೀಕರಿಸದೆ ಇರುವಂತ ಪರಿಸ್ಥಿತಿ ಹೋಗಬಹುದು ಹಾಗಾಗಿ ನಮ್ಮ ಕಡೆಯಿಂದ ಪರಿಶೀಲನೆ ಮಾಡಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ಅಫ್ಜಲ್ ಚೊಚ್ಚಲ ನಿರ್ದೇಶನದ ‘ಹೊಸತರ’ ಚಿತ್ರದ ಚಿತ್ರೀಕರಣ ಮುಕ್ತಾಯ..!