Download Our App

Follow us

Home » ರಾಜಕೀಯ » ಶಾಸಕ ಸ್ಥಾನದಿಂದ ಮುನಿರತ್ನರನ್ನು ಸಸ್ಪೆಂಡ್​ ಮಾಡುವಂತೆ ಸ್ಪೀಕರ್‌ಗೆ ಸಚಿವ ಎಚ್.ಕೆ ಪಾಟೀಲ್ ಪತ್ರ..!

ಶಾಸಕ ಸ್ಥಾನದಿಂದ ಮುನಿರತ್ನರನ್ನು ಸಸ್ಪೆಂಡ್​ ಮಾಡುವಂತೆ ಸ್ಪೀಕರ್‌ಗೆ ಸಚಿವ ಎಚ್.ಕೆ ಪಾಟೀಲ್ ಪತ್ರ..!

ಬೆಂಗಳೂರು : ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಹಾಗೂ ಹನಿಟ್ರ್ಯಾಪ್ ಮಾಡಿರುವ ಗಂಭೀರ ಆರೋಪದ ಮೇಲೆ ಪ್ರಕರಣ ದಾಖಲಾಗಿದ್ದು, ಸದ್ಯ 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇನ್ನು ಮುನಿರತ್ನ ಪ್ರಕರಣಗಳ ತನಿಖೆಯನ್ನು ರಾಜ್ಯ ಸರ್ಕಾರ ಎಸ್​ಐಟಿಗೆ ವಹಿಸಿದೆ. ಮತ್ತೊಂದೆಡೆ ಮುನಿರತ್ನ ಅವರ ಶಾಸಕ ಸ್ಥಾನದಿಂದ ಅಮಾನತುಗೊಳಿಸಬೇಕೆಂದು ಆಗ್ರಹಗಳು ವ್ಯಕ್ತವಾಗುತ್ತಿವೆ.

ಇದೆಲ್ಲದರ ಮಧ್ಯ ವಿಧಾನಸಭೆ ಸದಸ್ಯತ್ವದಿಂದ ಮುನಿರತ್ನ ಅವರನ್ನು ಅಮಾನತುಗೊಳಿಸಬೇಕೆಂದು ಸ್ವತಃ ಕಾನೂನು ಸಚಿವ ಎಚ್​ಕೆ ಪಾಟೀಲ್ ಅವರು ಸ್ಪೀಕರ್​ ಯುಟಿ ಖಾದರ್​​ಗೆ ಪತ್ರ ಬರೆದಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ.

ಈ ಬಗ್ಗೆ ಕಾನೂನು ಸಚಿವ ಎಚ್​​ಕೆ ಪಾಟೀಲ್ ಅವರು ವಿಧಾನಸಭೆ ಸಭಾಧ್ಯಕ್ಷರಾದ ಯುಟಿ ಖಾದರ್​ ಅವರಿಗೆ ಪತ್ರ ಬರೆದಿದ್ದು, ವಿಧಾನಸಭೆ ಸದಸ್ಯತ್ವದಿಂದ ಮುನಿರತ್ನರನ್ನು ಅಮಾನತುಗೊಳಿಸಬೇಕೆಂದು ಆಗ್ರಹಿಸಿದ್ದಾರೆ. ಅಲ್ಲದೇ ನೀತಿ-ನಿರೂಪಣಾ ಸಮಿತಿ ರಚನೆ ಮಾಡಿ, ಯಾವುದೇ ಅಸಭ್ಯ ವರ್ತನೆ ಅಸಂಸದೀಯ ವರ್ತನೆಗೆ ಗಂಭೀರವಾದ ಮತ್ತು ಕಠಿಣ ಕ್ರಮಗಳ ಕುರಿತು ನಿಯಂತ್ರಣ ಮತ್ತು ಕಡಿವಾಣ ಹಾಕಲೇಬೇಕು ಎಂದಿದ್ದಾರೆ.

ಎಚ್​ಕೆ ಪಾಟೀಲ್ ಬರೆದ ಪತ್ರದಲ್ಲೇನಿದೆ? ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ನೈತಿಕ ಅಧ:ಪತನಕ್ಕೆ ಕಾರಣವಾದ ಅತ್ಯಂತ ಹೇಯವಾದ, ಅಸಭ್ಯವಾದ ಭಾಷೆ ಬಳಸಿ ಕೀಳು ಅಭಿರುಚಿ ಪ್ರದರ್ಶಿಸಿದ ಈ ಘಟನೆ ಕ್ಷಮಾರ್ಹವಲ್ಲ . ವಿಧಾನಸಭೆಯ ಸದಸ್ಯರಿಗೆ ನೈತಿಕ ಮೌಲ್ಯಗಳ ನಿಯಂತ್ರಣ ಹೇರುವ “ನೀತಿ-ನಿರೂಪಣಾ ಸಮಿತಿ” (Ethics Committee of State Legislature) ಎಂದೆಂದಿಗಿಂತಲೂ ಇಂದು ರಚಿಸಬೇಕಾದ ಅತೀ ಅವಶ್ಯಕತೆ ಇದೆ. ಸದನದ ಒಳಗೆ ಹಾಗೂ ಹೊರಗೆ ಅಸಭ್ಯವಾಗಿ ವರ್ತಿಸುವ ಸದಸ್ಯರ ವರ್ತನೆಯನ್ನು ಮೌಲ್ಯಗಳನ್ನು ಗಾಳಿಗೆ ತೂರುವ ನಡತೆಗಳನ್ನು ನಿಯಂತ್ರಿಸುವ ನಿಯಮಗಳನ್ನು ತಕ್ಷಣ ರಚಿಸಬೇಕು. ಸಂವಿಧಾನದತ್ತವಾಗಿ ಸಭಾಧ್ಯಕ್ಷರಿಗೆ ಪ್ರದತ್ತವಾಗಿರುವ ಪರಾಮಾಧಿಕಾರವನ್ನು ಚಲಾಯಿಸಿ ವಿಶೇಷ ಅಪರೂಪದ ಕ್ರಮ ಕೈಗೊಳ್ಳುವ ಮೂಲಕ ವಿಧಾನಸಭೆ ಸದಸ್ಯರಾದ ಕೆ.ಮುನಿರತ್ನ ಅವರನ್ನು ವಿಧಾನಸಭೆಯಿಂದ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

“ನೀತಿ-ನಿರೂಪಣಾ ಸಮಿತಿ” (Ethics Committee of State Legislature) ರಚನೆ ಮಾಡಿ. ಆ ಸಮಿತಿಯ ಮೂಲಕ ಅಸಭ್ಯವಾಗಿ ವರ್ತಿಸುವ ಸದಸ್ಯರ ವಿರುದ್ಧ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಯಾವುದೇ ಅಸಭ್ಯ ವರ್ತನೆ ಅಸಂಸದೀಯ ವರ್ತನೆಗೆ ಗಂಭೀರವಾದ ಮತ್ತು ಕಠಿಣ ಕ್ರಮಗಳ ಕುರಿತು ನಿಯಂತ್ರಣ ಮತ್ತು ಕಡಿವಾಣ ಹಾಕಲೇಬೇಕು ಎಂದು ಸ್ಪೀಕರ್​ ಯುಟಿ ಖಾದರ್​​ ಅವರಿಗೆ ಬರೆದ ಪತ್ರದಲ್ಲಿ ಒತ್ತಾಯಿಸಿದ್ದಾರೆ.

 

ಇದನ್ನೂ ಓದಿ : ಮಹಾಲಕ್ಷ್ಮಿ ಮರ್ಡರ್​ ಕೇಸ್‌ಗೆ ಹೊಸ ಟ್ವಿಸ್ಟ್‌ – ಕೊಲೆಗಾರ ಯಾರು? ತನಿಖೆಯಲ್ಲಿ ಸ್ಫೋಟಕ ಸುಳಿವು ಪತ್ತೆ..!

Leave a Comment

DG Ad

RELATED LATEST NEWS

Top Headlines

ತಾಯಿಗೆ ಮರು ಪ್ರೀತಿ, ಹೊಸ ಜೀವನ.. ಹೆತ್ತಮ್ಮನಿಗೇ 2ನೇ ಮದುವೆ ಮಾಡಿಸಿದ ಪುತ್ರ..!

ಪತಿಯನ್ನು ಕಳೆದುಕೊಂಡು ಒಂಟಿಯಾಗಿದ್ದ ತಾಯಿಗೆ ಮಗನೇ ಮುಂದೆ ನಿಂತು ಮದುವೆ ಮಾಡಿಸಿದ ಅಚ್ಚರಿಯ ಘಟನೆಯೊಂದು ನಡೆದಿದೆ. 18 ವರ್ಷ ತಾಯಿ ಜೊತೆಗಿದ್ದ ಮಗ ಅಬ್ದುಲ್ ಅಹಾದ್ ಬಹಳ

Live Cricket

Add Your Heading Text Here