ದೊಡ್ಡಬಳ್ಳಾಪುರ : ದೊಡ್ಡಬಳ್ಳಾಪುರದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದು ಮಾರಾಟ ಮಾಡಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 65 ವರ್ಷದ ನರಸಪ್ಪ ಬಂಧಿತ ಆರೋಪಿ.
ಬಂಧಿತ ಆರೋಪಿ ನರಸಪ್ಪ ದೊಡ್ಡಬಳ್ಳಾಪುರ ತಾಲೂಕಿನ ಅಪೇಗೌಡನ ಪಾಳ್ಯ ಗ್ರಾಮದ ತನ್ನ ತೋಟದಲ್ಲೇ ಗಾಂಜಾ ಬೆಳೆದು ಮಾರಾಟ ಮಾಡುತ್ತಿದ್ದನು. ಸರಿಯಾದ ಮಾಹಿತಿ ಮೆರೆಗೆ ದಾಳಿ ನಡೆಸಿದ ಪೊಲೀಸರು ಒಂದು ಲಕ್ಷ 67,500 ರೂಪಾಯಿ ಮೌಲ್ಯದ 16 ಕೆಜಿ 800 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಚಿತ್ರದ ಮೂಲಕ ಜನರಮನ ಗೆದ್ದ ‘ಮಾವು ಬೇವು’ ಈಗ ಪುಸ್ತಕರೂಪದಲ್ಲಿ ಲಭ್ಯ..!
Post Views: 869