ಬೆಂಗಳೂರು : ಇಂದಿನಿಂದ 4 ದಿನಗಳ ಕಾಲ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಇಂದು ಆರೆಂಜ್ ಹಾಗೂ ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ಇಂದು ಆರೆಂಜ್ ಅಲರ್ಟ್, ಇನ್ನುಳಿದ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯಪುರ, ಬಾಗಲಕೋಟೆ, ಕೊಪ್ಪಳ ಹಾಗೂ ಗದಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಮೇ 22 ರಂದು ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತು 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಮೇ 23ರಂದು ಬೀದರ್ ಹಾಗೂ ಕಲಬುರಗಿ ಎರಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಬೆಂಗಳೂರು ಸೇರಿದಂತೆ ದಕ್ಷಿಣ ಹಾಗೂ ಉತ್ತರ ಒಳನಾಡಿನ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ : ವಿಜಯ್ ಸಂಪುಟ ವಿಸ್ತರಣೆ – 21 ಟಿವಿಕೆ, ಇಬ್ಬರು ಕಾಂಗ್ರೆಸ್ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ!








