ಚಿಕ್ಕಮಗಳೂರಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಹೈಡ್ರಾಮಾ – MLC ಸಿಟಿ ರವಿ ಮೇಲೆ ಹಲ್ಲೆಗೆ ಯತ್ನ!

ಚಿಕ್ಕಮಗಳೂರು : ಚಿಕ್ಕಮಗಳೂರಿನ ರಾಂಪುರದಲ್ಲಿ ಕಾಮಗಾರಿ ವೀಕ್ಷಣೆಗೆ ಬಂದಿದ್ದ ಪರಿಷತ್​​ ಸದಸ್ಯ ಸಿ.ಟಿ ರವಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಗೋಬ್ಯಾಕ್​​ ಘೋಷಣೆ ಕೂಗಿದ್ದಾರೆ. ಇದರ ಪರಿಣಾಮ ಎಂಎಲ್‌ಸಿ ಸಿ.ಟಿ.ರವಿ ಎದುರೇ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರು ಕೈಕೈ ಮಿಲಾಯಿಸಿದ್ದು, ಹೈಡ್ರಾಮಾ ಸೃಷ್ಟಿಯಾಗಿದೆ. 

ರಾಂಪುರದಿಂದ ಶಕ್ತಿ ನಗರದವರೆಗೂ ಕಾಮಗಾರಿಗಳ ವೀಕ್ಷಣೆ ಮಾಡಿ ಸಿ.ಟಿ. ರವಿ ವಾಪಸ್​​ ಬರುತ್ತಿದ್ದ ವೇಳೆ ರಾಂಪುರ ಬಳಿ ಕಾಂಗ್ರೆಸ್ ಕಾರ್ಯಕರ್ತರು ಜಮಾವಣೆಯಾಗಿದ್ದಾರೆ. ಈ ವೇಳೆ ಕಾಂಗ್ರೆಸ್​​ ಮತ್ತು ಬಿಜೆಪಿ ಕಾರ್ಯಕರ್ತರು ಪರಸ್ಪರ ಎದುರಾಗಿದ್ದು, ಎರಡೂ ಕಡೆಯಿಂದ ಘೋಷಣೆಗಳು ಮೊಳಗಿವೆ.

ಇದು ವಿಕೋಪಕ್ಕೆ ಹೋಗಿ ಸಿ.ಟಿ. ರವಿ ಸಮ್ಮುಖದಲ್ಲಿಯೇ ಕಾರ್ಯಕರ್ತರು ಪರಸ್ಪರ ಕೈ ಕೈ ಮಿಲಾಯಿಸಿದ್ದು, ಕಾಂಗ್ರೆಸ್ ಕಾರ್ಯಕರ್ತರು​​ MLC ಸಿಟಿ ರವಿ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಬಳಿಕ ಬಿಜೆಪಿ ಕಾರ್ಯಕರ್ತರು ಮತ್ತು ಸಿ.ಟಿ ರವಿ ರಸ್ತೆ ಮಧ್ಯೆ ಧರಣಿ ಕುಳಿತ ಘಟನೆ ನಡೆದಿದೆ.

ಇದನ್ನೂ ಓದಿ : ವಿಜಯ್ ಸಂಪುಟ ವಿಸ್ತರಣೆ – 21 ಟಿವಿಕೆ, ಇಬ್ಬರು ಕಾಂಗ್ರೆಸ್ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ!

Btv Kannada
Author: Btv Kannada

Leave a Comment

Read More

Read More