ಮೈಸೂರು : ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲಿಸಿವಂತೆ ಮೈಸೂರಿನ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ಪ್ರದೀಪ್ ಕುಮಾರ್ ಅವರಿಂದ ಪ್ರಕರಣ ದಾಖಲು ಮಾಡಲಾಗಿದೆ.
ಬೆಂಗಳೂರಿನಿಂದ ದೂರು ದಾಖಲಿಸಲು ಮೈಸೂರಿನ ಕಚೇರಿಗೆ ಬಂದ ದೂರುದಾರ ಪ್ರದೀಪ್ ಕುಮಾರ್, ಮೈಸೂರು ಲೋಕಾಯುಕ್ತ ಎಸ್.ಪಿ ಸುದೇಶ್ ಅವರಿಗೆ ಕೋರ್ಟ್ ಆದೇಶದ ಮೇರೆಗೆ ಸಿಎಂ ಸಿದ್ದರಾಮಯ್ಯ ವಿರುದ್ದ FIR ದಾಖಲಿಸಬೇಕೆಂದು ಮನವಿ ಮಾಡಿದ್ದಾರೆ. ಪ್ರದೀಪ್ ದೂರು ನೀಡುವ ವೇಳೆ ಜೆಡಿಎಸ್ ನಿಯೋಗ ಸಾಥ್ ನೀಡಿದೆ.
ನಿನ್ನೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿತ್ತು. ಈ ಬೆನ್ನಲ್ಲೆ ಇದೀಗ ದೂರುದಾರ ಪ್ರದೀಪ್ ನೇತೃತ್ವದಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇನ್ನು, FIR ದಾಖಲು ಮಾಡಲು ಅಧಿಕಾರಿಗಳು ಹಿಂದೇಟು ಹಾಕಿದ್ದಾರೆ ಎನ್ನಲಾಗಿದೆ. ಹೈಕೋರ್ಟ್ ಆದೇಶ ಪಾಲನೆ ಮಾಡ್ತಿಲ್ಲ ಎಂದು ಪ್ರದೀಪ್ ಆಕ್ರೋಶ ಹೊರಹಾಕಿದ್ದು, ನಮ್ಮ ದೂರಿಗೆ ಸ್ವೀಕೃತಿ ನೀಡಿದ್ದಾರೆ, ಎಂಡೋಸ್ಮೆಂಟ್ ನೀಡಿಲ್ಲ, ಎಂಡೋಸ್ಮೆಂಟ್ ನೀಡದಿದ್ರೆ ಧರಣಿ ಮಾಡುವೆ ಎಂದು ದೂರುದಾರ ಪ್ರದೀಪ್ ಹೇಳಿದ್ದಾರೆ.
ಇದನ್ನೂ ಓದಿ : ಬಿಗ್ ಬಾಸ್ ಆರಂಭಕ್ಕೂ ಮೊದಲೇ ಸೆಟ್ನಲ್ಲಿ ಭಾರೀ ಅವಘಡ.. ಏನಾಯ್ತು?