ಬೆಂಗಳೂರು : ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು. ಈ ಬೆನ್ನಲ್ಲೇ ನಿನ್ನೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಆದೇಶ ನೀಡಿದೆ. ಸದ್ಯ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ವಿಪಕ್ಷಗಳಾದ ಬಿಜೆಪಿ-ಜೆಡಿಎಸ್ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ.
ಇದೀಗ ಈ ವಿಚಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ, ಸಿಎಂ ಸಿದ್ದರಾಮಯ್ಯ ಅವರು, ನಾನೇಕೆ ರಾಜೀನಾಮೆ ಕೊಡಲಿ. ನಾನೇನು ತಪ್ಪು ಮಾಡಿದ್ದೇನೆ ನೀವೇ ಹೇಳಿ? ಬಿಜೆಪಿ, ಜೆಡಿಎಸ್ ನಾಯಕರ ಷಡ್ಯಂತ್ರ ಇದು. ಯಾವುದೇ ಕಾರಣಕ್ಕೂ ನಾನು ರಾಜೀನಾಮೆ ಕೊಡಲ್ಲ ಎಂದು ಇಂದೂ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇನ್ನು ನಾನು ರಾಜೀನಾಮೆ ನೀಡೋ ಅಗತ್ಯ ಇಲ್ಲ. ನನ್ನಿಂದ ಯಾವುದೇ ತಪ್ಪು ನಡೆದಿಲ್ಲ.ಬಿಜೆಪಿಯವರಿಗೆ ರಾಜೀನಾಮೆ ಕೇಳೋ ನೈತಿಕತೆ ಇಲ್ಲ ಎಂದು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇದನ್ನೂ ಓದಿ : ಉಡುಪಿ : ಈಜುತ್ತಾ ಹೊಳೆ ದಾಟಿ ವಿದ್ಯುತ್ ದುರಸ್ತಿ ಮಾಡಿದ ಮೆಸ್ಕಾಂ ಸಿಬ್ಬಂದಿ – ಗ್ರಾಮಸ್ಥರಿಂದ ಮೆಚ್ಚುಗೆ..!