ಕರ್ನಾಟಕದ ಹೆಮ್ಮೆಯ ಕಲೆಗಳ ಸಾಲಿನಲ್ಲಿ ಕರಾವಳಿಯ ಗಂಡುಕಲೆ ಯಕ್ಷಗಾನ ಕೂಡ ಒಂದು. ಇದು ಕರಾವಳಿಯ ಕಲೆಯೇ ಆದರೂ ಕನ್ನಡ ನಾಡಿನಾದ್ಯಂತ ಯಕ್ಷಗಾನಕ್ಕೆ ಹಲವು ಅಭಿಮಾನಗಳಿದ್ದಾರೆ. ಇದೀಗ ದೂರದ ಅಮೆರಿಕದಲ್ಲೂ ಯಕ್ಷಗಾನದ ಕಂಪು ಪಸರಿಸಿದ್ದು, ಈ ಕುರಿತ ವಿಡಿಯೋವೊಂದು ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಕೆಲ ದಿನಗಳ ಹಿಂದೆ ಅಮೆರಿಕದಲ್ಲಿ ನಡೆದ ಸ್ವಾತಂತ್ರ್ಯೋತ್ಸವದ ಸರಕಾರಿ ಕಾರ್ಯಕ್ರಮದ ಪರೇಡ್‌ನಲ್ಲಿ ಯಕ್ಷಗಾನ ಕಲೆಯನ್ನು ಪ್ರದರ್ಶಿಸಲಾಯಿತು. ಪರೇಡ್‌ನಲ್ಲಿ ಯಕ್ಷಗಾನ ಕಲಾವಿದರು ಪಟ್ಲ ಸತೀಶ್ ಶೆಟ್ಟಿ ಕಂಠದಲ್ಲಿ ಮೂಡಿಬಂದ ಅದ್ಭುತ ಭಾಗವತಿಕೆಗೆ ಹೆಜ್ಜೆ ಹಾಕಿದ್ದಾರೆ.
ಈ ಕುರಿತ ವಿಡಿಯೋವನ್ನು ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರ ಅಭಿಮಾನಿ ಹೆಸರಿನ ಫೇಸ್‌ಬುಕ್ ಪೇಜ್ ಒಂದರಲ್ಲಿ ಹಂಚಿಕೊಳ್ಳಲಾಗಿದ್ದು, ಅಮೆರಿಕದ ಬೀದಿ ಬೀದಿಯೂ ಯಕ್ಷಗಾನಮಯ, ಪಟ್ಲಮಯ; ಸ್ವಾತಂತ್ರ್ಯೋತ್ಸವದ ಸರ್ಕಾರಿ ಕಾರ್ಯಕ್ರಮದ ಪರೇಡ್‌ನಲ್ಲಿ ವಿಜೃಂಭಿಸಿದ ನಮ್ಮ ಹೆಮ್ಮೆಯ ಕಲೆ ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.
ಇನ್ನು ಕೆಲ ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 1 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದೆ. ವಿಡಿಯೋ ನೋಡಿದ ಅಭಿಮಾನಿಗಳಂತೂ ʼಆಹಾ… ಎಂತಹ ಅದ್ಭುತ ಕಂಠಸಿರಿʼ ಎಂದು ಹೊಗಳಿಕೆಯ ಮಾತುಗಳನ್ನಾಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼತುಂಬಾನೇ ಚೆಂದವಾಗಿದೆʼ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ.
ಇದನ್ನೂ ಓದಿ : ಮಧುಗಿರಿ : ಇಬ್ಬರು ಹೆಣ್ಣು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ..!