Download Our App

Follow us

Home » ರಾಜ್ಯ » ಚಲಿಸುತ್ತಿದ್ದ ರೈಲಿನಲ್ಲೇ ಹಠಾತ್ ಹೃದಯಾಘಾತ – ದೇವರಂತೆ ಬಂದು ಪ್ರಯಾಣಿಕನ ಪ್ರಾಣ ಉಳಿಸಿದ TTE..!

ಚಲಿಸುತ್ತಿದ್ದ ರೈಲಿನಲ್ಲೇ ಹಠಾತ್ ಹೃದಯಾಘಾತ – ದೇವರಂತೆ ಬಂದು ಪ್ರಯಾಣಿಕನ ಪ್ರಾಣ ಉಳಿಸಿದ TTE..!

ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾಯುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ವಯಸ್ಕರರು, ವೃದ್ಧರು ಮಾತ್ರವಲ್ಲದೆ ಪುಟ್ಟ ಮಕ್ಕಳೂ ಕೂಡಾ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಪ್ರತಿನಿತ್ಯ ಹಾರ್ಟ್‌ ಅಟ್ಯಾಕ್‌ ಪ್ರಕರಣದ ಸುದ್ದಿಗಳು ಕೇಳಿ ಬರುತ್ತಲೇ ಇವೆ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ರೈಲಿನಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೆ ತುತ್ತಾಗಿದ್ದಾರೆ. ತಕ್ಷಣ ಸಿಪಿಆರ್‌ ನೀಡುವ ಮೂಲಕ ತನ್ನ ಸಮಯ ಪ್ರಜ್ಞೆಯಿಂದ ಟಿಟಿಇ ಪ್ರಯಾಣಿಕನ ಪ್ರಾಣವನ್ನು ಉಳಿಸಿದ್ದಾರೆ. ಇವರ ಈ ಸಮಯ ಪ್ರಜ್ಞೆ ಮತ್ತು ಮಾನವೀಯ ಕಾರ್ಯಕ್ಕೆ ಭಾರೀ ಶ್ಲಾಘನೆ ವ್ಯಕ್ತವಾಗುತ್ತಿದೆ.

ಬಿಹಾರದ ದರ್ಭಾಂಗಾದಿಂದ ಉತ್ತರ ಪ್ರದೇಶದ ವಾರಣಾಸಿಗೆ ತೆರಳುತ್ತಿದ್ದ 11062 ಪವನ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರಿಗೆ ಹೃದಯಾಘಾತ ಕಾಣಿಸಿಕೊಂಡಿದ್ದು, ವಿಷಯ ತಿಳಿದು ತಕ್ಷಣ ಆಗಮಿಸಿದ ಟಿಟಿಇ ವೈದ್ಯರಿಗೆ ಕರೆ ಮಾಡಿ ಅವರು ಕೊಟ್ಟ ಸಲಹೆಯಂತೆ ಸಿಪಿಆರ್‌ ನೀಡಿ ಒಂದು ಅಮೂಲ್ಯ ಜೀವವನ್ನು ಕಾಪಾಡಿದ್ದಾರೆ. ನಂತರ ರೈಲು ಛಾಪ್ರಾ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಆ ವ್ಯಕ್ತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಈ ಕುರಿತ ವಿಡಿಯೋವನ್ನು ರೈಲ್ವೆ ಸಚಿವಾಲಯ  ತನ್ನ ಅಧೀಕೃತ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, “ರೈಲ್ವೆ ಪ್ರಯಾಣಿಕರೊಬ್ಬರಿಗೆ ಜೀವ ದಾನ ನೀಡಿದ ಟಿಟಿಇ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದೆ.

ಇನ್ನು ವಿಡಿಯೋ ​​ಭಾರೀ ವೈರಲ್​​ ಆಗುತ್ತಿದ್ದು, ಒಬ್ಬ ಬಳಕೆದಾರರು ʼಜೀವ ರಕ್ಷಕನಾಗಿ ಬಂದ ಟಿಟಿಇಗೆ ನನ್ನದೊಂದು ಸಲಾಂʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಅವರ ನಿಸ್ವಾರ್ಥ ಸೇವೆಯನ್ನು ಗುರುತಿಸಿದ ರೈಲ್ವೆ ಸಚಿವಾಲಯಕ್ಕೆ ವಂದನೆಗಳುʼ ಎಂದು ಹೇಳಿದ್ದಾರೆ. ಇನ್ನೂ ಅನೇಕರು ಅಮೂಲ್ಯ ಜೀವವೊಂದನ್ನು ಉಳಿಸಿದ ಟಿಟಿಇ ಸವಿಂದ್‌ ಅವರಿಗೆ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.

ಇದನ್ನೂ ಓದಿ : ಸಾಗರದಾಚೆಯು ಹಬ್ಬಿದ ಕರಾವಳಿಯ ಗಂಡುಕಲೆ ಯಕ್ಷಗಾನದ ವೈಭವ.. ವಿಡಿಯೋ ವೈರಲ್..!

Leave a Comment

DG Ad

RELATED LATEST NEWS

Top Headlines

ಕಮಲ್ ಹಾಸನ್ ಅಭಿನಯದ ‘ಥಗ್ ಲೈಫ್’ ಚಿತ್ರದ ರಿಲೀಸ್​ ಡೇಟ್​​ ಅನೌನ್ಸ್..!

ಕಮಲ್ ಹಾಸನ್ ಅಭಿನಯದ ಮತ್ತು ಮಣಿರತ್ನಂ ನಿರ್ದೇಶನದ ‘ಥಗ್ ಲೈಫ್’ ಚಿತ್ರ ವಿಶ್ವದಾದ್ಯಂತ 2025ರ ಜೂನ್ 5ರಂದು ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ. ಇಂದು ಕಮಲ್ ಹಾಸನ್ ಅವರ ಹುಟ್ಟುಹಬ್ಬದ

Live Cricket

Add Your Heading Text Here