Download Our App

Follow us

Home » ಸಿನಿಮಾ » ರಾಮಮಂದಿರ ಉದ್ಘಾಟನೆಗೆ ನಟ ರಿಷಬ್ ಶೆಟ್ಟಿಗೆ ಆಹ್ವಾನ.. ‘ಇದು ನನ್ನ ಪೂರ್ವ ಜನ್ಮದ ಪುಣ್ಯ’ ಎಂದ ಶೆಟ್ರು..!

ರಾಮಮಂದಿರ ಉದ್ಘಾಟನೆಗೆ ನಟ ರಿಷಬ್ ಶೆಟ್ಟಿಗೆ ಆಹ್ವಾನ.. ‘ಇದು ನನ್ನ ಪೂರ್ವ ಜನ್ಮದ ಪುಣ್ಯ’ ಎಂದ ಶೆಟ್ರು..!

ಐತಿಹಾಸಿಕ ಕ್ಷಣಕ್ಕೆ ಇನ್ನು ಎರಡು ದಿನ ಮಾತ್ರ ಬಾಕಿ ಉಳಿದಿದ್ದು, ಅಯೋಧ್ಯೆಯಲ್ಲಿ ಅಂತಿಮ ಹಂತದ ಸಿದ್ಧತೆಗಳು ಬಲು ಜೋರಾಗಿಯೇ ನಡೆಯುತ್ತಿದೆ. ರಾಮ ಮಂದಿರದ ಉದ್ಘಾಟನೆ ಹಿನ್ನೆಲೆಯಲ್ಲಿ ಜ.22ರಂದು ನಡೆಯುವ ಅಭೂತಪೂರ್ವ ಸಮಾರಂಭಕ್ಕಾಗಿ ಬಹುಕೋಟಿ ಜನರು ಕಾದಿದ್ದಾರೆ.

ರಾಮ ಮಂದಿರ  ಉದ್ಘಾಟನೆಯ ಕ್ಷಣವನ್ನು ನೇರವಾಗಿ ಕಣ್ತುಂಬಿಕೊಳ್ಳುವ ಅವಕಾಶ ಕೆಲವೇ ಮಂದಿಗೆ ಸಿಗಲಿದೆ. ಭಾರತೀಯ ಚಿತ್ರರಂಗದ ಹಲವು ಸೆಲೆಬ್ರಿಟಿಗಳಿಗೆ ಆಹ್ವಾನ ನೀಡಲಾಗಿದೆ. ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ರಿಷಬ್​ ಶೆಟ್ಟಿ ಅವರನ್ನೂ ಆಹ್ವಾನಿಸಲಾಗಿದೆ.

ಅಯೋಧ್ಯೆಯಿಂದ ಬಂದ ಆಹ್ವಾನ ಪತ್ರಿಕೆಯನ್ನು ರಿಷಬ್​ ಶೆಟ್ಟಿ ಸ್ವೀಕರಿಸಿದ್ದಾರೆ. ಈ ಸಂದರ್ಭದ ಫೋಟೋವನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇಂಥ ಮಹತ್ವದ ಅವಕಾಶ ಸಿಕ್ಕಿದ್ದಕ್ಕೆ ಅವರಿಗೆ ಬಹಳ ಖುಷಿ ಆಗಿದೆ.

‘ಶ್ರೀರಾಮ ಜಯ ರಾಮ ಜಯ ಜಯ ರಾಮ. ಬಾಲ್ಯದಿಂದಲೂ ನಮ್ಮ ಮನೆಗಳಲ್ಲಿ ರಾಮನಾಮವ ಭಜಿಸುತ್ತಾ, ರಾಮ ಪ್ರೇಮವ ಭುಜಿಸುತ್ತಾ, ಆತನ ಆದರ್ಶಪ್ರಾಯ ಜೀವನದ ಕಥೆಗಳನ್ನು ಗುರು ಹಿರಿಯರಿಂದ ಕೇಳುತ್ತಾ ಬೆಳೆದವರು ನಾವು. ಇಂದು ಆ ಶ್ರೀರಾಮ ತಾನು ಮಗುವಾಗಿ ಆಡಿದ, ಪ್ರಭುವಾಗಿ ಆಳಿದ ಆ ಅಯೋಧ್ಯೆಗೆ ಬರುವಂತೆ ಕರೆ ಕಳಿಸಿದ್ದಾನೆ. ಇದು ನನ್ನ ಪೂರ್ವ ಜನ್ಮದ ಪುಣ್ಯವೇ ಸರಿ! ಶ್ರೀರಾಮನಿಗೆ ಜಯವಾಗಲಿ, ಅಯೋಧ್ಯೆಗೆ ಜಯವಾಗಲಿ’ ಎಂದು ರಿಷಬ್​ ಶೆಟ್ಟಿ ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ : ಇಂದು ಬಜೆಟ್ ಪೂರ್ವಭಾವಿ ಸಭೆ ನಡೆಸಲಿರುವ ಸಿಎಂ ಸಿದ್ದರಾಮಯ್ಯ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here